ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

suddionenews
1 Min Read

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ ಸಿದ್ದರಾಮಯ್ಯ ಎಂಟ್ರಿಯಾದೊಡನೆ ಶಿಳ್ಳೆ, ಚಪ್ಪಾಳೆ ಹೊಡೆದು ಸ್ವಾಗತಿಸಿದ್ದಾರೆ.

ಕೇರಳದ ವಯನಾಡಿನಲ್ಲಿ ಉಒಚುನಾವಣೆ ಘೋಷಣೆಯಾಗಿದೆ. ರಾಹುಲ್ ಗಾಂಧಿ ಪ್ರತಿನಿಧಿಸಿದ್ದ ಕ್ಷೇತ್ರ ತೆರವಾಗಿತ್ತು. ಶಾಸಕರಾದ ಮೇಲೆ ಬೇರೆ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿದ್ದರು. ಹೀಗಾಗಿ ಕೇರಳದ ವಯನಾಡಿನಲ್ಲೂ ಉಪಚುನಾವಣೆ ಘೋಷಣೆಯಾಗಿದೆ. ಪ್ರಿಯಾಂಕ ಗಾಂಧಿ ಸ್ಪರ್ಧೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಇಂದು ಕೇರಳಕ್ಕೆ ಭೇಟಿ ನೀಡಿದ್ದರು. ಪ್ರಿಯಾಂಕ ಗಾಂಧಿ ಪರ ಪ್ರಚಾರಕ್ಕೆ ಸಜ್ಜಾಗಿದ್ದರು. ಪ್ರಿಯಾಂಕ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದರು. ಬಳಿಕ ವೇದಿಕೆ ಮೇಲೆ ಕಾರ್ಯಕ್ರಮ ನಡೆಸಲಾಗಿತ್ತು.

ವೇದಿಕೆ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕುಳಿತಿದ್ದರು. ಭಾಷಣ ಕೂಡ ಆರಂಭವಾಗಿತ್ತು. ರಾಹುಲ್ ಗಾಂಧಿ ಅಲ್ಲಿನ ಜನರನ್ನುದ್ದೇಶಿಸಿ ಮಾತನಾಡುವುದಕ್ಕೆ ಶುರು ಮಾಡಿದರು. ಅದೇ ಸಮಯಕ್ಕೆ ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ ಬಂದರು. ಅಲ್ಲಿ ತನಕ ಸೈಲೆಂಟ್ ಆಗಿದ್ದ ಜನ ಜೋರಾಗಿ ಕೂಗಿದ್ದಾರೆ. ಶಿಳ್ಳೆ, ಚಪ್ಪಾಳೆ ಹೊಡೆದಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ಭರ್ಜರಿ ಬಹುಮತದಿಂದ ವಯನಾಡು ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ. ಬಿಜೆಪಿ ನಮ್ಮ ಸೈದ್ಧಾಂತಿಕ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದು ಸಿದ್ದರಾಮಯ್ಯ ಹೇಳಿದರು. ವಯನಾಡಿನಲ್ಲಿ ರಾಹುಲ್‌ ಗಾಂಧಿ ಅವರು ಆರಂಭಿಸಿದ ಅಭಿವೃದ್ಧಿ ಕಾರ್ಯಗಳನ್ನು ಮುನ್ನಡೆಸಿಕೊಂಡು ಹೋಗಲು ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಸಮರ್ಥರಿದ್ದಾರೆ ಎಂದು ಸಿದ್ದರಾಮಯ್ಯ ಅವರು ಪ್ರಿಯಾಂಲ ಗಾಂಧಿ ಬಗ್ಗೆ ಜನರಿಗೆ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *