ಮೈಸೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆಗೆ ವಹಿಸಲಾಗಿದೆ. ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವುದೊಂದೆ ಬಾಕಿ ಇದೆ. ಆದರೆ ಸಿದ್ದರಾಮಯ್ಯ ಅವರ ಬೆಂಬಲಿಗರು ಸದಾ ನಾವು ನಿಮ್ಮೊಂದಿಗೆ ಎಂಬ ಅಭಿಯಾನ ಶುರು ಮಾಡಿದ್ದಾರೆ. ಮೈಸೂರಿನಲ್ಲಿ ಕಾರ್ಯಕರ್ತರು ಬೆಂಬಲಿಗರು ಸಿದ್ದರಾಮಯ್ಯ ಅವರ ಪೋಸ್ಟರ್ ಹಿಡಿದು ಅಭಿಯಾನ ಶುರು ಮಾಡಿದ್ದಾರೆ. ವಾದ್ಯ ಮೇಳಗಳೊಂದಿಗೆ, ಸಿದ್ದರಾಮಯ್ಯ ಅವರ ಪೋಸ್ಟರ್ ಹಿಡಿದು, ನಾವೂ ನಿಮ್ಮೊಂದಿಗೆ ಇದ್ದೇವೆ ಎಂದು ಘೋಷಣೆ ಮೊಳಗಿಸಿದ್ದಾರೆ.
ಅಷ್ಟೇ ಅಲ್ಲ ವಿಮಾನ ನಿಲ್ದಾಣದಲ್ಲಿ ಕಾರುಗಳ ಮೇಲೆ ಸಿದ್ದರಾಮಯ್ಯ ಅವರ ಭಾವಚಿತ್ರಗಳು ರಾರಾಜಿಸುತ್ತಿವೆ. ಇಂದು ಸಿದ್ದರಾಮಯ್ಯ ಅವರು ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ, ಸಾವಿರಾರು ಸಂಖ್ಯೆಯಲ್ಲಿ ಸಿದ್ದರಾಮಯ್ಯ ಅವರನ್ನು ಸ್ವಾಗತ ಮಾಡುವುದಕ್ಕೆ ಆಗಮಿಸಿದ್ದಾರೆ. ಎಲ್ಲಾ ಕಾರುಗಳ ಮೇಲೆ ನಾನು ಸಿದ್ದರಾಮಯ್ಯ ಅವರ ಪರ ಎಂದು ಪೋಸ್ಟರ್ ಗಳನ್ನು ಅಂಟಿಸಲಾಗಿದೆ.

ಇಂದು ಸಿದ್ದರಾಮಯ್ಯ ಅವರಿಗೆ ಮಹತ್ವದ ದಿನವಾಗಿದೆ. ಮೈಸೂರಿನ ಲೋಕಾಯುಕ್ತ ಪೊಲೀಸರು ಇಂದು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಿದ್ದಾರೆ. ಈ ಹಿನ್ನೆಲೆ ಎಲ್ಲಾ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕರಲ್ಲಿ ಸಿದ್ದರಾಮಯ್ಯ ವಿರುದ್ಧ ಧ್ವನಿ ಕೇಳುತ್ತಿದೆ. ಮೊದಲು ರಾಜೀನಾಮೆ ಕೊಡಿ ಎಂದೇ ಒತ್ತಡ ಹಾಕುತ್ತಿದ್ದಾರೆ. ಯಾವುದೇ ರೀತಿಯ ತನಿಖೆಗೂ ನಾನು ಸಿದ್ಧ ಎಂಬುದನ್ನು ಸಿದ್ದರಾಮಯ್ಯ ಅವರು ಈಗಾಗಲೇ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರ ಪರವಾಗಿಯೇ ಒಗ್ಗಟ್ಟಾಗಿದ್ದಾರೆ. ಈ ಹಿಂದೆ ಇದ್ದಂತೆ ಡಿಕೆಶಿ ಬಣ, ಸಿದ್ದರಾಮಯ್ಯ ಬಣ ಅಂತೇನಿಲ್ಲ. ಎಲ್ಲರೂ ಸಿದ್ದರಾಮಯ್ಯ ಪರವಾಗಿ ನಿಂತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















