Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಸಾಂಸ್ಕೃತಿಕ ನಾಯಕ : ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 20  : ಕುಲ ಕಸುಬನ್ನೇ ನಂಬಿ ಬದುಕುತ್ತಿರುವ ಭೋವಿ ಸಮಾಜವನ್ನು ಸಾಮಾಜಿಕವಾಗಿ ಸಮರ್ಥಗೊಳಿಸಲು ಕಾನೂನು ಅಡಿಯಲ್ಲೆ ಏನೆಲ್ಲಾ ಅವಕಾಶವಿದೆಯೋ ಅದನ್ನೆಲ್ಲಾ ಮಾಡುತ್ತೇನೆಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಭೋವಿ ಗುರುಪೀಠದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿರವರ ದೀಕ್ಷಾ ರಜತ ಮಹೋತ್ಸವ ಉದ್ಗಾಟಿಸಿ ಮಾತನಾಡಿದರು.

ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಪೀಠಾಧಿಪತಿಗಳಾಗಿ 25 ವರ್ಷಗಳನ್ನು ಪೂರೈಸಿ ಸಮಾಜವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಇನ್ನು ನೂರು ಕಾಲ ಬಾಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.

ಹಿಂದುಳಿದ ಶೋಷಣೆಗೊಳಗಾದ ಭೋವಿ ಸಮಾಜಕ್ಕೆ ಗುರಿ ಇರಬೇಕು. ಮಾರ್ಗದರ್ಶನ ಮಾಡಲು ಗುರು ಇರಬೇಕು. ಅಂಬೇಡ್ಕರ್, ಬಸವಣ್ಣ ಹೇಳಿದಂತೆ ಸಮ ಸಮಾಜ ನಿರ್ಮಾಣವಾಗಬೇಕು. ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಬೇಕಾದರೆ ಮೊದಲು ಅಕ್ಷರವಂತರಾಗಬೇಕು. ಇಲ್ಲದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಸಂವಿಧಾನದಡಿ ಸಿಕ್ಕಿರುವ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ ಅನ್ಯಾಯ, ಶೋಷಣೆಗೊಳಗಾಗಿರುವ ದುರ್ಬಲ ವರ್ಗದವರಿಗೆ ಸಾಮಾಜಿಕ, ಆರ್ಥಿಕ, ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಮೇಲು-ಕೀಳು, ಬಡವ-ಬಲ್ಲಿದ, ಅಕ್ಷರಸ್ಥ-ಅನಕ್ಷರಸ್ಥ ಎನ್ನುವ ತಾರತಮ್ಯ ಅಸಮಾನತೆ ಹೋಗಲಾಡಿಸಲು ಆಗುವುದಿಲ್ಲ. ಅಸಮಾನತೆಗೆ ನಾವು ನೀವುಗಳ್ಯಾರು ಕಾರಣರಲ್ಲ. ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಕುಯುಕ್ತಿಯಿಂದ ಅಸಮಾನತೆ ಇನ್ನು ಜೀವಂತವಾಗಿದೆ. ಎಲ್ಲಿಯವರೆಗೂ ಜಾತಿ ವ್ಯವಸ್ಥೆಯಿರುತ್ತದೋ ಅಲ್ಲಿಯತನಕ ಅಸಮಾನತೆಯಿರುತ್ತದೆ. ವಿದ್ಯೆಯಿಂದ ಮಾತ್ರ ಆರ್ಥಿಕ, ಸಾಮಾಜಿಕವಾಗಿ ಮೇಲೆ ಬರಬಹುದು. ಸಂವಿಧಾನದಡಿ ಅಕ್ಷರ ಕಲಿಯಲು ಎಲ್ಲರಿಗೂ ಅವಕಾಶವಿದೆ. ಭೋವಿ ಸಮಾಜದಲ್ಲಿ ಹುಟ್ಟಿದವರು ಉನ್ನತ ಅಧಿಕಾರಿಗಳಾಗಬಹುದು. ದಾಸ್ಯ ಪದ್ದತಿಯಿಂದ ಈಗಲೂ ಅನೇಕರು ಗುಲಾಮಗಿರಿಯಲ್ಲಿದ್ದಾರೆ. ಗುಲಾಮಗಿರಿ ಮನಸ್ಥಿತಿ ಬದಲಾಗಬೇಕಾದರೆ ಶಿಕ್ಷಣವಂತರಾಗಿ ಸ್ವಾಭಿಮಾನದಿಂದ ಬದುಕುವುದನ್ನು ಕಲಿಯಬೇಕೆಂದು ಭೋವಿ ಸಮುದಾಯಕ್ಕೆ ಕರೆ ನೀಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಹೇಳಿದಂತೆ ಶಿಕ್ಷಣ, ಸಂಘಟನೆ, ಹೋರಾಟದಿಂದ ಮಾತ್ರ ಬದುಕಿನಲ್ಲಿ ಬದಲಾವಣೆ ಕಂಡುಕೊಳ್ಳಬಹುದು. ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿರವರ ಸಮಾಜಮುಖಿ ಕೆಲಸಗಳಿಗೆ ಸದಾ ಜೊತೆಯಲ್ಲಿರುತ್ತೇನೆ. ಕುರಿಗಾಹಿಗಳು, ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಇನ್ನು ಹಿಂದುಳಿದಿದ್ದಾರೆ. ಕುಲ ಕಸುಬಿನಿಂದ ವಿದ್ಯಾವಂತರಾಗಲು ಸಾಧ್ಯವಿಲ್ಲ. ಕಡ್ಡಾಯ ಉಚಿತ ಶಿಕ್ಷಣ ಮೂಲಭೂತ ಹಕ್ಕು. ಎಸ್ಸಿಪಿ. ಟಿಎಸ್ಪಿ. ಕಾಯಿದೆ ಪಾಸ್ ಮಾಡಿದ್ದೇವೆ. 39 ಸಾವಿರದ 121 ಕೋಟಿ ರೂ.ಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭಿವೃದ್ದಿಗೆ ನಮ್ಮ ಸರ್ಕಾರ ಮೀಸಲಿಟ್ಟಿದೆ. ಇಲ್ಲಿಯವರೆಗೂ ಒಂದು ಲಕ್ಷದ 60 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ದಿಗೆ ಖರ್ಚು ಮಾಡಿದ್ದೇವೆ. ಜನಸಂಖ್ಯೆಗನುಗುಣವಾಗಿ ಹಣ ಖರ್ಚು ಮಾಡಲು ಮೊದಲ ಬಾರಿಗೆ ನಮ್ಮ ಸರ್ಕಾರ ಕಾನೂನು ಮಾಡಿತು. ಭೋವಿ ಅಭಿವೃದ್ದಿ ನಿಗಮ ರಚಿಸಿದ್ದು, ನಾವು, ದೇವಯ್ಯನನ್ನು ಕೆ.ಪಿ.ಎಸ್ಸಿ. ಸದಸ್ಯನಾಗಿ ಮಾಡಿದ್ದೇನೆ. ಭೋವಿ ಅಭಿವೃದ್ದಿ ನಿಗಮವನ್ನು ಭೋವಿ ವಡ್ಡರ ನಿಗಮ ಎಂದು ನಾಮಕರಣ ಮಾಡೋಣ. ಸಿದ್ದರಾಮೇಶ್ವರ ಅಧ್ಯಯನ ಪೀಠ ಮಾಡಲಾಗಿದೆ. ಭೋವಿ ಜನಾಂಗದಿಂದ ವಿಧಾನಪರಿಷತ್ ನಾಮ ನಿರ್ದೇಶನ ಮಾಡಿ, ಭೋವಿ ಅಭಿವೃದ್ದಿ ನಿಗಮಕ್ಕೆ ಅನುದಾನ ಮೀಸಲಿಡಲಾಗುವುದು ಎಂದು ವಾಗ್ದಾನ ಮಾಡಿದರು.


ಮಂತ್ರಾಲಯದ ಸುಬುದೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿ ಭೋವಿ ಜನಾಂಗ ಶ್ರಮ ಜೀವಿಗಳು, ಶೋಷಣೆಗೆ ಒಳಪಟ್ಟವರು. ಇಂತಹ ಜನಾಂಗವನ್ನು ಬಿಟ್ಟು ಬೇರೆ ಯಾವ ಸಮಾಜವೂ ಏನು ಮಾಡಲು ಆಗಲ್ಲ. ಭೋವಿ ಸಮುದಾಯದ ಏಳಿಗೆಗೆ ಗುರುಪೀಠ ಸ್ಥಾಪಿಸಿಕೊಂಡು ಕಳೆದ 25 ವರ್ಷಗಳಿಂದಲೂ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಮುನ್ನಡೆಸಿಕೊಂಡು ಹೋಗುತ್ತಿರುವುದು ಸುಲಭದ ಕೆಲಸವಲ್ಲ. ಅನ್ನ, ಅಕ್ಷರ, ಆರ್ಥಿಕ ಸಂಕಷ್ಟ ಪರಿಹರಿಸುವಲ್ಲಿ ದೃಢ ಸಂಕಲ್ಪ ತೊಟ್ಟಿದ್ದಾರೆ. ಸ್ವಾಮೀಜಿಯವರದು ಉತ್ತಮ ವ್ಯಕ್ತಿತ್ವ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಪರ ಯೋಜನೆಗಳನ್ನು ಹಾಕಿಕೊಂಡು ರಾಜ್ಯವನ್ನು ಮುನ್ನಡೆಸುತ್ತಿದ್ದಾರೆ. ಮಂತ್ರಾಲಯ ಜಾತ್ಯಾತೀತ ಕ್ಷೇತ್ರ ಹಿಂದೂ, ಮುಸಲ್ಮಾನ, ಕ್ರಿಸ್ತರು ನಮ್ಮಲ್ಲಿಗೆ ಬರುತ್ತಾರೆ. ಮುಂದಿನ ತಿಂಗಳು ನಡೆಯುವ ಜಾತ್ರೆಗೆ ಬನ್ನಿ ಎಂದು ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು.

 

ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಆಶೀರ್ವಚನ ನೀಡುತ್ತ ಬಸವಣ್ಣ ಯುಗ ಯುಗಗಳ ಸಾಂಸ್ಕøತಿಕ ನಾಯಕನಾದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಿನ ಕಾಲದ ಸಾಂಸ್ಕøತಿಕ ನಾಯಕ ಎಂದು ಬಣ್ಣಿಸಿದರು.

ಅಕ್ಷರವಂತರಾದವರು ಜಗತ್ತನ್ನು ಆಳಬಹುದು. ರಟ್ಟೆ ನಂಬಿ ಬದುಕುವ ಸಮುದಾಯ ಯಾವುದಾದರೂ ಇದ್ದರೆ ಅದು ಭೋವಿ ಜನಾಂಗ. ಹದಿನೈದು ವರ್ಷಗಳಿಂದ ಶಿಕ್ಷಣ ಸಂಸ್ಥೆ ತೆರೆದು ಸಾವಿರಾರು ಮಕ್ಕಳಿಗೆ ಶಿಕ್ಷಣ ಕೊಡುತ್ತಿದ್ದೇನೆ. ಪ್ರತಿ ಹಂತದಲ್ಲೂ ಭೋವಿ ಸಮಾಜ ಇರಬೇಕು. ಶಾಸಕರು, ಸಚಿವರು, ಸಂಸದರಾಗಬೇಕು. ಸಾಮಾಜಿಕ, ಆರ್ಥಿಕ, ಧಾರ್ಮಿಕವಾಗಿ ಉನ್ನತ ಮಟ್ಟಕ್ಕೆ ಹೋಗಬೇಕು. ನಂಬಿಕೆಯುಳ್ಳ ಸಮಾಜ ಭೋವಿ ಜನಾಂಗ ಕಲ್ಲು ಕ್ರಶರ್, ಕ್ವಾರಿಗಳಲ್ಲಿ ಕೆಲಸ ಮಾಡಲು ಉದ್ಯೋಗ ಭಾಗ್ಯ ನೀಡಬೇಕು. ಅದಕ್ಕಾಗಿ ಶೇ.50 ರಷ್ಟು ಮೀಸಲಾತಿ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿ ಬೇಡಿಕೆಯಿಟ್ಟರು. ಭೋವಿ ಅಭಿವೃದ್ದಿ ನಿಗಮಕ್ಕೆ ಭೋವಿ ವಡ್ಡರ ನಿಗಮ ಎಂದು ಹೆಸರಿಡುವಂತೆಯೂ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿದರು.

ದೀಕ್ಷಾ ರಜತ ಮಹೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ಮೈಸೂರು ಮಹಾರಾಜರು ಮೊದಲು ಭೋವಿಗಳಿಗೆ ಮೀಸಲಾತಿ ಕೊಟ್ಟರು. ನಂತರ ಡಿ.ದೇವರಾಜ ಅರಸುರವರು ಮೀಸಲಾತಿ ನೀಡಿದ್ದು, ಭೋವಿ ಅಭಿವೃದ್ದಿ ನಿಗಮಕ್ಕೆ ಐದು ನೂರು ಕೋಟಿ ರೂ.ಗಳನ್ನು ಮೀಸಲಿಡಬೇಕು. ಕೆ.ಪಿ.ಸಿ.ಸಿ. ಮೆಂಬರ್, ವಿಧಾನಪರಿಷತ್‍ಗೆ ನಾಮನಿರ್ದೇಶನ, ನಮ್ಮ ಜನಾಂಗದವರು ಸಂಸದರಾಗಬೇಕೆಂಬ ಬೇಡಿಕೆಯಿಟ್ಟಿದ್ದೆವು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲವನ್ನು ಈಡೇರಿಸಿದ್ದಾರೆ. ನಿಮ್ಮ ಜೊತೆ ನಾವಿರುತ್ತೇವೆ. ನಮ್ಮ ಮಠಕ್ಕೆ ವಿಶೇಷ ಅನುದಾನ ಕೊಡಿ ಎಂದು ಕೋರಿದರು.

 

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡುತ್ತ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಭೋವಿ ಸಮುದಾಯವನ್ನು ಶೈಕ್ಷಣಿಕ, ಸಾಮಾಜಿಕವಾಗಿ ಜಾಗೃತಿಗೊಳಿಸಿದ ಫಲವಾಗಿ ದೀಕ್ಷಾ ರಜತ ಮಹೋತ್ಸವ ಆಚರಿಸಲು ಸಾಧ್ಯವಾಗಿದೆ. ಭೋವಿಗಳು ಕಲ್ಲು ಹೊಡೆಯುವ ಕೆಲಸವನ್ನೇ ಮಾಡಬೇಕೆಂದಿಲ್ಲ. ಸಂವಿಧಾನದಲ್ಲಿ ಸಿಕ್ಕಿರುವ ಅವಕಾಶ ಬಳಸಿಕೊಂಡು ಶಿಕ್ಷಣವಂತರಾಗಬೇಕು. ಪ್ರತಿಭಾವಂತ ಮಕ್ಕಳಿಗೆ ಪುರಸ್ಕರಿಸುತ್ತಿರುವುದು ಪ್ರೇರಣೆಯಾದಂತಿದೆ. ಮುಂದಿನ ವರ್ಷಗಳಲ್ಲಿ ಇದು ಇನ್ನು ಹೆಚ್ಚಬೇಕು. ಸಂವಿಧಾನದ ಮೂಲಕ ಜಾಗೃತರಾಗಿ. ನಿಮ್ಮ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಮುಖ್ಯಮಂತ್ರಿಗಳು ಸಿದ್ದರಾಗಿದ್ದಾರೆಂದರು.

 

ಮಾಜಿ ಸಚಿವ ಅರವಿಂದ ಲಿಂಬಾವಳಿ ಮಾತನಾಡಿ ಭೋವಿಗಳು ಕೆರೆ ಕಟ್ಟೆ ಕಟ್ಟುವುದು ಕಲ್ಲು ಹೊಡೆಯುವುದು ಕುಲ ಕಸುಬನ್ನಾಗಿ ಮಾಡಿಕೊಂಡಿದ್ದಾರೆ. ದುಶ್ಚಟಗಳಿಂದ ದೂರವಿರುವಂತೆ ಸ್ವಾಮೀಜಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ಹದಿನಾಲ್ಕನೆ ವಯಸ್ಸಿನಲ್ಲಿಯೇ ಸ್ವಾಮೀಜಿಯಾಗಿ ದೀಕ್ಷೆ ಪಡೆದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ 25 ವರ್ಷಗಳನ್ನು ಕಳೆದಿದ್ದಾರೆ. ಜನಾಂಗ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಕುಲ ಕಸುಬಿಗೆ ಕೊಡಲಿ ಪೆಟ್ಟು ಬಿದ್ದಿದೆ. ಕಲ್ಲು ಹೊಡೆಯಲು ಅವಕಾಶ ಮಾಡಿಕೊಡಿ. ಅರಣ್ಯ ಇಲಾಖೆಯವರ ಕಿರುಕುಳ ತಪ್ಪಿಸಿ ಭೋವಿ ಅಭಿವೃದ್ದಿ ನಿಗಮಕ್ಕೆ ಐದು ನೂರು ಕೋಟಿ ರೂ. ಅನುದಾನ ಕೊಡಿ ಎಂದು ಮುಖ್ಯಮಂತ್ರಿಗಳಲ್ಲಿ ವಿನಂತಿಸಿದರು.

ಪುಲಕೇಶಿ ನಗರ ಶಾಸಕ ಎ.ಸಿ.ಶ್ರೀನಿವಾಸ್, ಪಾವಗಡ ಶಾಸಕ ವಿ. ವೆಂಕಟೇಶ್, ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ರವಿಕುಮಾರ್ ಇವರುಗಳು ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರುಗಳಾದ ಡಾ.ಎಂ.ಚಂದ್ರಪ್ಪ, ಕೆ.ಸಿ.ವೀರೇಂದ್ರಪಪ್ಪಿ, ಟಿ.ರಘುಮೂರ್ತಿ, ಕೋಲಾರ ಸಂಸದ ಮಲ್ಲೇಶ್‍ಬಾಬು, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಆದಿಜಾಂಬವ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ದ್ರಾಕ್ಷಾ ರಸ ಮಂಡಳಿ ಅಧ್ಯಕ್ಷ ಬಿ.ಯೋಗೇಶ್‍ಬಾಬು, ನ್ಯಾಯವಾದಿ ಶಂಕರಪ್ಪ, ನಾರಾಯಣಸ್ವಾಮಿ, ಸೀತಾರಾಮಪ್ಪ ಸೇರಿದಂತೆ ಭೋವಿ ಸಮಾಜದ ಅನೇಕ ಮುಖಂಡರುಗಳು ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

ಬಿಗ್ ಬಾಸ್ ಮನೆಯಲ್ಲಿ ಅಣ್ಣ-ತಂಗಿ ಯುದ್ಧ : ಶಿಶಿರ್ ಗೆ ಸವಾಲು ಹಾಕಿದ ಚೈತ್ರಾ..!

ಬಿಗ್ ಬಾಸ್ ಕನ್ನಡ ಸೀಸನ್ 11 ನಲ್ಲಿ ಶಿಶಿರ್ ಹಾಗೂ ಚೈತ್ರಾ ಅಣ್ಣ ತಂಗಿಯಂತೆ. ಚೈತ್ರಾ ಕುಗ್ಗಿದಾಗೆಲ್ಲ ಶಿಶಿರ್ ಧೈರ್ಯ ತುಂಬಿದ್ದಾರೆ. ಅದಕ್ಕಾಗಿಯೇ ಬಿಗ್ ಬಾಸ್ ತಂಗಿ ನಿನಗಾಗಿ ಎಂಬ ಫೋಸ್ಟರ್ ಅನ್ನೇ ರಿಲೀಸ್

ಬ್ಯಾಂಕ್‍ಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ ಅಸಮದಾನ

ಚಿತ್ರದುರ್ಗ. ನ.21: ಸರ್ಕಾರ ಬಡವರಿಗಾಗಿ ರೂಪಿಸಿರುವ ಸಹಾಯಧನ ಹಾಗೂ ಸಾಲ ಸೌಲಭ್ಯದ ಸ್ಕೀಂಗಳನ್ನು ಜಾರಿ ಮಾಡುವಲ್ಲಿ ನಿರ್ಲಕ್ಷ್ಯ ತೋರುವ ಬ್ಯಾಂಕುಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ ಅಸಮಾಧಾನ ವ್ಯಕ್ತಪಡಿಸಿದರು. ಇದೇ ಪರಿಸ್ಥಿತಿ ಮುಂದುವರೆದರೆ

error: Content is protected !!