ಸಿದ್ದರಾಮಯ್ಯ, ಡಿಕೆ ಶಿವಕುಮಾರ್ : ಯಾರಾಗ್ತಾರೆ ಮುಖ್ಯಮಂತ್ರಿ ?

ಬೆಂಗಳೂರು : ಹಲವು ವರ್ಷಗಳ ನಂತರ ಕಾಂಗ್ರೆಸ್ ಕಾರ್ಯಕರ್ತರ ಮುಖದಲ್ಲಿ ಮಂದಹಾಸ ಮೂಡಿದೆ. ರಾಹುಲ್ ಗಾಂಧಿ ಕಣ್ಣಲ್ಲಿ ಸಂತಸ ಕಾಣುತ್ತಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊಸ ಹುರುಪನ್ನು ತಂದಿದೆ.

ಕನ್ನಡ ನಾಡಿನ ಜನತೆ ಬಿಜೆಪಿ ಆಡಳಿತದಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ಕಿರೀಟ ತೊಡಿಸಿದ್ದಾರೆ. ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಿಸುವ ಮತದಾರರು ಈ ಬಾರಿಯೂ ಅದೇ ಪದ್ಧತಿ ಮುಂದುವರಿಸಿದ್ದಾರೆ. ಅದರಂತೆಯೇ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿದೆ.  ಆದರೆ  ಸಿಎಂ ಕುರ್ಚಿಯಲ್ಲಿ ಯಾರು ಕೂರುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿದೆ.

ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸುತ್ತಾರಾ ? ಅಥವಾ ನಾಯಕತ್ವಕ್ಕೆ ನಿಷ್ಠರಾಗಿರುವ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡುತ್ತಾರಾ? ಇದು ಪ್ರಸ್ತುತ ಜನರಲ್ಲಿ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಿರಲಿಲ್ಲ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಈಗ ಯಾರನ್ನು ಸಿಎಂ ಆಗಿ ಆಯ್ಕೆ ಮಾಡುತ್ತಾರೆ ಎಂಬುದು ಚರ್ಚೆಯ ವಿಷಯವಾಗಿದೆ.

ಜನರ ಒಲವು ಸಿದ್ದರಾಮಯ್ಯ ಕಡೆ :
ಸಿದ್ದರಾಮಯ್ಯ ಅವರು 2013 ರಿಂದ 2018 ರವರೆಗೆ ಕರ್ನಾಟಕದ ಸಿಎಂ ಆಗಿದ್ದರು. ಐದು ವರ್ಷಗಳ ಪೂರ್ಣಾವಧಿಯನ್ನು ಪೂರೈಸಿದ ಮೂವರು ನಾಯಕರಲ್ಲಿ ಸಿದ್ದರಾಮಯ್ಯ ಒಬ್ಬರು.

ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಜನರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕೆಂದು ಬಯಸಿದ್ದಾರೆಂದು ಸಮೀಕ್ಷೆಗಳು ತಿಳಿಸಿದ್ದವು. ಕರ್ನಾಟಕದ ಇಬ್ಬರು ದೊಡ್ಡ ನಾಯಕರಲ್ಲಿ ಒಬ್ಬರು ಯಡಿಯೂರಪ್ಪ ಮತ್ತು ಇನ್ನೊಬ್ಬರು ಸಿದ್ದರಾಮಯ್ಯ.

ಈಗಿನ ಬಿಜೆಪಿಯಲ್ಲಿ ಯಡಿಯೂರಪ್ಪ ಅವರು ಸಕ್ರಿಯ ರಾಜಕಾರಣದಿಂದ ದೂರವಿದ್ದು,  ಸಿದ್ದರಾಮಯ್ಯನವರೇ ಮಾಸ್ ಲೀಡರ್. 76ರ ಹರೆಯದ ಸಿದ್ದರಾಮಯ್ಯ ಅವರು ಇದೇ ನನ್ನ ಕೊನೆಯ ಚುನಾವಣೆ ಎಂದು ಘೋಷಿಸಿದ್ದರು. ಅಲ್ಲದೇ ಸಿಎಂ ಆಗಿ ಕೆಲಸ ಮಾಡಿದ ಅನುಭವ ಅವರಿಗಿದೆ.
ಇದರೊಂದಿಗೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಘೋಷಿಸುವ ಸಾಧ್ಯತೆಗಳಿವೆ.

ಸಿದ್ದರಾಮಯ್ಯ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ, ದಲಿತರು) ನಾಯಕರಾಗಿ ತಮ್ಮದೇ ಛಾಪನ್ನು ಹೊಂದಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಅನ್ನು ಟೀಕಿಸುವುದರಲ್ಲಿ ಅವರು ಮುಂಚೂಣಿಯಲ್ಲಿದ್ದಾರೆ.

ಮತ್ತೊಂದೆಡೆ ಡಿ.ಕೆ.ಶಿವಕುಮಾರ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಿದರು. 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸೋತಿತ್ತು. ಕರ್ನಾಟಕದಲ್ಲಿ 28 ಲೋಕಸಭಾ ಸ್ಥಾನಗಳ ಪೈಕಿ ಪಕ್ಷವು ಕೇವಲ ಒಂದು ಸ್ಥಾನವನ್ನು ಗೆದ್ದಿತ್ತು. ಅವರು ಡಿಕೆಶಿ ಸಹೋದರ ಸುರೇಶ್ ಎಂಬುದು ಗಮನಾರ್ಹ.

suddionenews

Recent Posts

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

  ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…

28 minutes ago

ಯಾವ ವಯಸ್ಸಿನಿಂದ ಮಕ್ಕಳಿಗೆ ಚಹಾ ಅಥವಾ ಕಾಫಿಯನ್ನು ನೀಡಬಹುದು ? ಚಿಕ್ಕ ವಯಸ್ಸಿನಲ್ಲಿ ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…

3 hours ago

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…

4 hours ago

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

13 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

13 hours ago

ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಬಿಸಿಯೂಟ ಸವಿದ ಜಿ.ಪಂ ಸಿಇಒ

ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

13 hours ago