Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ವಿರುದ್ದ ಕಿಡಿಕಾರಿದಾ ಸಿದ್ದರಾಮಯ್ಯ

Facebook
Twitter
Telegram
WhatsApp

ಹುಬ್ಬಳ್ಳಿ: ಅಲ್ಪಸಂಖ್ಯಾತರಿಗೆ ಬಿಜೆಪಿ ಟಿಕೆಟ್ ಬೇಕಾದರೆ ತಮ್ಮ ಕಚೇರಿ ಕಸ ಗುಡಿಸಬೇಕು ಎಂದು ಈಶ್ವರಪ್ಪ ಹೇಳುತ್ತಾರೆ. ಬಿಜೆಪಿಯವರು ಪ್ರಜಾಪ್ರಭುತ್ವ, ಬ್ರಾತ್ರುತ್ವ, ಸಮಾನತೆ, ಸೌಹಾರ್ದತೆ, ಸರ್ವಧರ್ಮ ಸಹಿಷ್ಣುತೆ ಸಾರುವ ಸಂವಿಧಾನ ಬದಲಾವಣೆ ಮಾಡುತ್ತೀವಿ ಎನ್ನುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಂಗೂರು ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿದ್ದವರು ಉದಾಸಿ, ಉಪಾಧ್ಯಕ್ಷರಾಗಿದ್ದವರು ಶಿವರಾಜ್ ಸಜ್ಜನರ್. ಈ ಇಬ್ಬರೂ ಸೇರಿ ಕಾರ್ಖಾನೆಯನ್ನು ಸಂಪೂರ್ಣ ಹಾಳು ಮಾಡಿದರು. ಇದಕ್ಕೆ ನಾವೇನು ಮಾಡಬೇಕು? ಇವತ್ತು ಕಾರ್ಖಾನೆಯನ್ನು ಬೋಗ್ಯಕ್ಕೆ ಕೊಟ್ಟಿರೋದು ಸುಳ್ಳಾ? ಉದಾಸಿ ಅಧ್ಯಕ್ಷರಾಗುವ ಮೊದಲು ಕಾರ್ಖಾನೆ ಲಾಭದಲ್ಲಿ ಇದ್ದಿದ್ದು ಸುಳ್ಳಾ? ಈ ಬಗ್ಗೆ ಮಾತಾಡಿ ಎಂದು ಜನರೇ ಒತ್ತಾಯ ಮಾಡುತ್ತಿದ್ದಾರೆ. ಹಾಗಾಗಿ ಸತ್ಯ ವಿಚಾರವನ್ನು ನಿನ್ನೆ ಹೇಳಿದ್ದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಡಿಸೇಲ್ ಬೆಲೆ 45 ರೂಪಾಯಿ ಇತ್ತು, ಈಗ 100 ರೂಪಾಯಿ ಆಗಿದೆ. ಇದಕ್ಕೆ ಕೇಂದ್ರ ಸರ್ಕಾರದ ತೆರಿಗೆ ಹೆಚ್ಚಳ ಕಾರಣ. ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ 3 ರೂಪಾಯಿ 45 ಪೈಸೆ ಇದ್ದ ಅಬಕಾರಿ ಸುಂಕವನ್ನು ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ 31 ರೂಪಾಯಿ 84 ಪೈಸೆಗೆ ಹೆಚ್ಚಿಸಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 125 ಡಾಲರ್ ಗೆ ತಲುಪಿದಾಗಲೂ ಡೀಸೆಲ್ ಬೆಲೆ 50 ರೂಪಾಯಿಯ ಆಸುಪಾಸಿನಲ್ಲೇ ಇತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆಯನ್ನು ಕಡಿಮೆ ಮಾಡಲಿ. ಪೆಟ್ರೋಲ್ ಮೇಲೆ ತೆರಿಗೆ ಹಾಕೋದು ರಾಜ್ಯಗಳ ಹಕ್ಕು, ಪೆಟ್ರೋಲ್ ಡೀಸೆಲ್ ಜಿಎಸ್‌ಟಿಗೆ ಸೇರಿಸಿದರೆ ರಾಜ್ಯಗಳಿಗೆ ತೆರಿಗೆ ವಿಧಿಸುವ ಹಕ್ಕು ಹೋಗುತ್ತದೆ. ಹಾಗಾಗಿ ಇದಕ್ಕೆ ನನ್ನ ವಿರೋಧವಿದೆ.

ಹಿಂದೆ ಜಿ.ಎಸ್.ಟಿ ಕೌನ್ಸಿಲ್ ಸಭೆಗೆ ಯಡಿಯೂರಪ್ಪ ಅವರ ಪರವಾಗಿ ಹೋಗುತ್ತಿದ್ದದ್ದು ಬಸವರಾಜ ಬೊಮ್ಮಾಯಿ ಅವರೆ. ರಾಜ್ಯದ ಆರ್ಥಿಕ ಸ್ಥಿತಿಗತಿ ಏನಿದೆ ಅಂತ ಮುಖ್ಯಮಂತ್ರಿ ಆದವರಿಗೆ ಗೊತ್ತಿರಲ್ವಾ? ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ಈ ರೀತಿ ಸುಳ್ಳು ಹೇಳುತ್ತಿದ್ದಾರೆ ಅಷ್ಟೆ.

ವರ್ಕಿಂಗ್ ಕಮಿಟಿಯ ಹಲವಾರು ಮಂದಿ ಸದಸ್ಯರು ನೀವೇ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ರಾಹುಲ್ ಗಾಂಧಿಯವರ ಬಳಿ ಒತ್ತಾಯ ಮಾಡಿದ್ದಾರೆ, ಹಾಗಾಗಿ ನಿಮ್ಮೆಲ್ಲರ ಮನವಿಯ ಬಗ್ಗೆ ಯೋಚನೆ ಮಾಡ್ತೀನಿ ಎಂದು ರಾಹುಲ್ ಗಾಂಧಿಯವರು ಭರವಸೆ ನೀಡಿದ್ದಾರೆ. ರಾಹುಲ್ ಗಾಂಧಿಯವರೇ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂಬುದು ನನ್ನ ಅಭಿಪ್ರಾಯ. ಈ ಹಿಂದೆಯೂ ಹಲವು ಬಾರಿ ಇದನ್ನೇ ಹೇಳಿದ್ದೆ ಎಂದರು

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉಪಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ : ಡಿಕೆ ಶಿವಕುಮಾರ್ ಹೇಳಿದ್ದೇನು..?

ಮುರುಡೇಶ್ವರ: ರಾಜ್ಯದ ಉಪಚುನಾವಣೆ, ಮಹಾರಾಷ್ಟ್ರ ಎಲೆಕ್ಷನ್ ಮುಗಿಸಿಕೊಂಡು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪತ್ನಿ ಜೊತೆಗೆ ಬಿಜಚ್ ಕಡೆಗೆ ಹೋಗಿದ್ದಾರೆ. ಮುರುಡೇಶ್ವರ ಬೀಚಗ ಸದ್ದಿನಲ್ಲಿ ಕೂತು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಇದೇ ವೇಳೆ ಸಂಪುಟ

ವಕ್ಫ್ ವಿರುದ್ದ ನವೆಂಬರ್ 25 ರಂದು ಭಾರತೀಯ ಕಿಸಾನ್ ಸಂಘದಿಂದ ಬೃಹತ್ ಹೋರಾಟ : ಕರಿಕೆರೆ ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಭಾರತೀಯ ಕಿಸಾನ್ ಸಂಘದ ವತಿಯಿಂದ ವಕ್ಫ್ ವಿರುದ್ಧ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ

ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.   ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು

error: Content is protected !!