Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಜೆಟ್ ನಲ್ಲಿ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ

---Advertisement---

ಬೆಂಗಳೂರು; 2025-26ನೇ ರಾಜ್ಯ ಬಜೆಟ್ ನಲ್ಲಿ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೃಷಿ ಮತ್ತು‌ ತೋಟಗಾರಿಕೆ ಇಲಾಖೆಗೆ 7 ಸಾವುರದ 145 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರಿಗೆ ರೈತ ಸಮೃದ್ಧಿ ಯೋಜನೆ, ಕೃಷಿ ಯಾಂತ್ರೀಕರಣ ಯೋಜನೆಯಡಿ 50 ಸಾವಿರ ರೈತರಿಗೆ 428 ಕೋಟಿ ರೂಪಾಯಿ ನೆರವು ನೀಡಲಾಗಿದೆ. ಕೃಷಿ ಭಾಗ್ಯ 3 ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡ ನಿರ್ಮಾಣ ಮಾಡಲಾಗುತ್ತಿದ್ದು, ಈ ವರ್ಷ 12 ಸಾವಿರ ಕೃಷಿ ಹೊಂಡಗಳನ್ನ ನಿರ್ಮಿಸುವ ಗುರಿ ಹೊಂದಲಾಗಿದೆ.

ಇನ್ನು ತೊಗರಿಬೇಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ ಮಾಡುವುದು. ತೊಗರಿಯನ್ನ ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸಲು ಕ್ರಮ. ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸುವ ಉದ್ದೇಶ ಹೊಂದಲಾಗಿದೆ. ರೈತರ ಆದಾಯ ಹಾಗೂ ಪೌಷ್ಟಿಕ ಭದ್ರತೆಯನ್ನ ಸುಧಾರಿಸಲು 88 ಕೋಟಿ ರೂಪಾಯಿ ನೀಡಲಾಗಿದೆ.

ರಾಜ್ಯದಲ್ಲಿ 6 ಸಾವಿರ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಒತ್ತು ನೀಡಲಾಗಿದೆ. ಕೃಷಿ ಭಾಗ್ಯ ಯೋಜನೆಯಡಿ 3 ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡ ನಿರ್ಮಾಣ, ರಸಗೊಬ್ಬರ, ಬಿತ್ತನೆ ಬೀಜ, ಜೈವಿಕ ಗೊಬ್ಬರ ಗುಣಮಟ್ಟದ ಪರೀಕ್ಷೆಗೆ 58 ಪ್ರಯೋಗಾಲಯ. ವಿಜಯಪುರ ಮುದ್ದೆಬಿಹಾಳದಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ. ಅಥಣಿ ತಾಲೂಕಿನಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಕಾರ್ಯಸಾಧ್ಯತಾ ವರದಿ, ಮಂಡ್ಯ ಕೃಷಿ ವಿವಿ ಸ್ಥಾಪನೆಗೆ 25 ಕೋಟಿ ರೂಪಾಯಿ ನೀಡಿಕೆ. 11 ಲಕ್ಷ ಹೆಕ್ಟೇರ್​ ಪ್ರದೇಶದಲ್ಲಿ ಭೂಸಂಪನ್ಮೂಲ ಪೂರ್ಣಕ್ಕೆ ಕ್ರಮ, ಜೈವಿಕ ಕೃಷಿ ಪರಿಕರ ಸ್ಟಾರ್ಟ್​​ಅಪ್​ಗಳ ಮೂಲಕ ಮಾರಾಟಕ್ಕೆ ಉತ್ತೇಜನ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...