ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಮೈಸೂರು: ಈ ಬಾರಿ ಅಂದುಕೊಂಡಂತ ಮಳೆ ಆಗಲಿಲ್ಲ.. ಬೆಳೆ ಕೈಕೊಟ್ಟಿದೆ. ವ್ಯವಸಾಯಕ್ಕೆ ಹಾಕಿದ ಹಣವೂ ಈ ಬಾರಿಯ ಬೆಳೆಯಲ್ಲಿ ಬರುವುದು ಅನುಮಾನವಿದೆ. ರೈತರ ಕಷ್ಟ ಅರಿತ ಸಿದ್ದರಾಮಯ್ಯ ಸಿಹಿ ಸುದ್ದಿಯೊಂದನ್ನ ನೀಡಿದ್ದಾರೆ. ಜಂಟಿ ಸಮೀಕ್ಷೆಯ ಬಳಿಕ ಅತಿವೃಷ್ಠಿಯಿಂದ ಬೆಳೆ ಕಳೆದುಕೊಂಡ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಸಿದ್ದರಾಮಯ್ಯ ಅವರು, ಕೃಷಿ ತೋಟಗಾರಿಕೆ, ನೀರಾವರಿ ಇಲಾಖೆಗಳ ಅಧಿಕಾರಿಗಳು ಜಂಟಿ ಸಭೆ ಮಾಡಿ, ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ಹಂಚಿಕೊಳ್ಳಬೇಕು. ಜಂಟಿ ಸಭೆಗಳನ್ನು ನಡೆಸಬೇಕು. ಹುರುಳಿ, ಮುಸುಕಿನ ಜೋಳ, ಬಿತ್ತನೆ ಇನ್ನೂ ಆಗಬೇಕಿದೆ. ಕೆಲವು ರೈತರು ಬೆಳೆಯನ್ನು ಬದಲಾಯಿಸಿದ್ದಾರೆ. ಗೊಬ್ಬರ, ಬೀಜ ನಮ್ಮಲ್ಲಿ ಸಂಗ್ರಹವಿದೆ. ರೈತರಿಗೆ ಅಗತ್ಯಕ್ಕಿಂತ ಹೆಚ್ಚು ಗೊಬ್ಬರವನ್ನೂ ದಾಸ್ತಾನು ಮಾಡಿಟ್ಟುಕೊಂಡಿದ್ದೇವೆ. ಯೂರಿಯಾ ಅಗತ್ಯ ಇರುವುದಕ್ಕಿಂತ ಹೆಚ್ಚು ಸಂಗ್ರಹವಿದೆ.
ಹೆಚ್.ಡಿ.ಕೋಟೆ ವ್ಯಾಪ್ತಿಯ ಹಾಡಿಗಳಲ್ಲಿನ 16 ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಆದರೆ ವಿದ್ಯುತ್ ಮಾತ್ರ ಬರುತ್ತಿಲ್ಲ. ಹಾಡಿಗಳ ಕುಡಿಯುವ ನೀರು, ಹಕ್ಕು ಪತ್ರ, ಅಂಗನವಾಡಿ, ಮನೆ, ಆಹಾರ ವಿತರಣೆ, ಹಾಡಿ ನಿವಾಸಿಗಳ ಅರಣ್ಯ ಉತ್ಪನ್ನ ಸಂಗ್ರಹ, ಮಾರಾಟದ ವಿಚಾರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದೌರ್ಜನ್ಯ ಮತ್ತು ಅಸಹಾಕಾರದ ಬಗ್ಗೆ ಸಭೆಯಲ್ಲಿ ವ್ಯಾಪಕ ಚರ್ಚೆ ಆಗಿ ಈ ಬಗ್ಗೆ ಸೂಕ್ತವಾಗಿ ವರ್ತಿಸಲು, ಅರಣ್ಯವಾಸಿಗಳ ಜೊತೆ ಅಂತಃಕರಣದಿಂದ ವರ್ತಿಸುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್