Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳೆ ಕಳೆದುಕೊಂಡ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ

---Advertisement---

ಮೈಸೂರು: ಈ ಬಾರಿ ಅಂದುಕೊಂಡಂತ ಮಳೆ ಆಗಲಿಲ್ಲ.. ಬೆಳೆ ಕೈಕೊಟ್ಟಿದೆ. ವ್ಯವಸಾಯಕ್ಕೆ ಹಾಕಿದ ಹಣವೂ ಈ ಬಾರಿಯ ಬೆಳೆಯಲ್ಲಿ ಬರುವುದು ಅನುಮಾನವಿದೆ. ರೈತರ ಕಷ್ಟ ಅರಿತ ಸಿದ್ದರಾಮಯ್ಯ ಸಿಹಿ ಸುದ್ದಿಯೊಂದನ್ನ ನೀಡಿದ್ದಾರೆ. ಜಂಟಿ ಸಮೀಕ್ಷೆಯ ಬಳಿಕ ಅತಿವೃಷ್ಠಿಯಿಂದ ಬೆಳೆ ಕಳೆದುಕೊಂಡ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಸಿದ್ದರಾಮಯ್ಯ ಅವರು, ಕೃಷಿ ತೋಟಗಾರಿಕೆ, ನೀರಾವರಿ ಇಲಾಖೆಗಳ ಅಧಿಕಾರಿಗಳು ಜಂಟಿ ಸಭೆ ಮಾಡಿ, ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ಹಂಚಿಕೊಳ್ಳಬೇಕು. ಜಂಟಿ ಸಭೆಗಳನ್ನು ನಡೆಸಬೇಕು. ಹುರುಳಿ, ಮುಸುಕಿನ ಜೋಳ, ಬಿತ್ತನೆ ಇನ್ನೂ ಆಗಬೇಕಿದೆ. ಕೆಲವು ರೈತರು ಬೆಳೆಯನ್ನು ಬದಲಾಯಿಸಿದ್ದಾರೆ. ಗೊಬ್ಬರ, ಬೀಜ ನಮ್ಮಲ್ಲಿ ಸಂಗ್ರಹವಿದೆ. ರೈತರಿಗೆ ಅಗತ್ಯಕ್ಕಿಂತ ಹೆಚ್ಚು ಗೊಬ್ಬರವನ್ನೂ ದಾಸ್ತಾನು ಮಾಡಿಟ್ಟುಕೊಂಡಿದ್ದೇವೆ. ಯೂರಿಯಾ ಅಗತ್ಯ ಇರುವುದಕ್ಕಿಂತ ಹೆಚ್ಚು ಸಂಗ್ರಹವಿದೆ.

ಹೆಚ್‌.ಡಿ.ಕೋಟೆ ವ್ಯಾಪ್ತಿಯ ಹಾಡಿಗಳಲ್ಲಿನ 16 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಆದರೆ ವಿದ್ಯುತ್‌ ಮಾತ್ರ ಬರುತ್ತಿಲ್ಲ. ಹಾಡಿಗಳ ಕುಡಿಯುವ ನೀರು, ಹಕ್ಕು ಪತ್ರ, ಅಂಗನವಾಡಿ, ಮನೆ, ಆಹಾರ ವಿತರಣೆ, ಹಾಡಿ ನಿವಾಸಿಗಳ ಅರಣ್ಯ ಉತ್ಪನ್ನ ಸಂಗ್ರಹ, ಮಾರಾಟದ ವಿಚಾರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದೌರ್ಜನ್ಯ ಮತ್ತು ಅಸಹಾಕಾರದ ಬಗ್ಗೆ ಸಭೆಯಲ್ಲಿ ವ್ಯಾಪಕ ಚರ್ಚೆ ಆಗಿ ಈ ಬಗ್ಗೆ ಸೂಕ್ತವಾಗಿ ವರ್ತಿಸಲು, ಅರಣ್ಯವಾಸಿಗಳ ಜೊತೆ ಅಂತಃಕರಣದಿಂದ ವರ್ತಿಸುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now