ಸಿದ್ದರಾಮಯ್ಯ ಸರ್ಕಾರದ ತುಘಲಕ್ ದರ್ಬಾರ್ ಮಿತಿಮೀರಿದೆ : ಬಸವರಾಜ್ ಬೊಮ್ಮಾಯಿ

1 Min Read

 

 

ಬೆಂಗಳೂರು: ಸದನದಿಂದ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಪ್ರತಿಭಟನೆಯಲ್ಲಿ ನಿರತರಾಗಿದ್ದ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

 

ಇವರು ಮಾಡುವ ಅನಾಚಾರಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನಮ್ಮ ಶಾಸಕರನ್ನು ಅಮಾನತುಗೊಳಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುತ್ತಿದೆ. ನೀವೂ ನಮ್ಮ ಶಾಸಕರನ್ನು ಅಮಾನತು ಮಾಡಬಹುದು. ಆದರೆ ಹತ್ತಿಕ್ಕಲು ಸಾಧ್ಯವಿಲ್ಲ.

ನಿಮ್ಮ ಈ ಎಣಹೇಡಿ ದಬ್ಬಾಳಿಕೆಗೆ ನಾವೂ ಕುಗ್ಗುವುದಿಲ್ಲ. ನಿಮ್ಮ ಜನ ವಿರೋಧಿ ನಾಡ ವಿರೋಧಿ ಕೆಲಸಗಳ ವಿರುದ್ಧ ನಾವೂ ಹೋರಾಡುತ್ತೇವೆ. ರಾಜ್ಯದ ಹಿರಿಯ ಐಎಎಸ್​ ಅಧಿಕಾರಿಗಳನ್ನು ತಮ್ಮ ಮನೆಯಾಳುಗಳನ್ನಾಗಿ ನಡೆಸಿಕೊಂಡಿರುವ ಕಾಂಗ್ರೆಸ್, ಅದನ್ನು ಪ್ರಶ್ನಿಸಿದ್ದಕ್ಕೆ ತನ್ನ ದಮನಕಾರಿ ಹಾಗೂ ಸೇಡಿನ ರಾಜಕೀಯವನ್ನು ಸ್ಪೀಕರ್ ಮೂಲಕ ಮಾಡಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *