ಬೆಂಗಳೂರು: ಸದನದಿಂದ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಪ್ರತಿಭಟನೆಯಲ್ಲಿ ನಿರತರಾಗಿದ್ದ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇವರು ಮಾಡುವ ಅನಾಚಾರಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನಮ್ಮ ಶಾಸಕರನ್ನು ಅಮಾನತುಗೊಳಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುತ್ತಿದೆ. ನೀವೂ ನಮ್ಮ ಶಾಸಕರನ್ನು ಅಮಾನತು ಮಾಡಬಹುದು. ಆದರೆ ಹತ್ತಿಕ್ಕಲು ಸಾಧ್ಯವಿಲ್ಲ.
ನಿಮ್ಮ ಈ ಎಣಹೇಡಿ ದಬ್ಬಾಳಿಕೆಗೆ ನಾವೂ ಕುಗ್ಗುವುದಿಲ್ಲ. ನಿಮ್ಮ ಜನ ವಿರೋಧಿ ನಾಡ ವಿರೋಧಿ ಕೆಲಸಗಳ ವಿರುದ್ಧ ನಾವೂ ಹೋರಾಡುತ್ತೇವೆ. ರಾಜ್ಯದ ಹಿರಿಯ ಐಎಎಸ್ ಅಧಿಕಾರಿಗಳನ್ನು ತಮ್ಮ ಮನೆಯಾಳುಗಳನ್ನಾಗಿ ನಡೆಸಿಕೊಂಡಿರುವ ಕಾಂಗ್ರೆಸ್, ಅದನ್ನು ಪ್ರಶ್ನಿಸಿದ್ದಕ್ಕೆ ತನ್ನ ದಮನಕಾರಿ ಹಾಗೂ ಸೇಡಿನ ರಾಜಕೀಯವನ್ನು ಸ್ಪೀಕರ್ ಮೂಲಕ ಮಾಡಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











