ಹುಬ್ಬಳ್ಳಿ: ಸಿದ್ದರಾಮಯ್ಯ ಅಂದ್ರೆ ಒಂದಷ್ಟು ಜನಕ್ಕೆ ರಾಜಕೀಯ ಹೊರತುಪಡಿಸಿ ಖುಷಿ ಅನ್ಸುತ್ತೆ. ಅವರ ಮಾತು.. ಅವರ ನಡವಳಿಕೆಯಿಂದ ಸಾಕಷ್ಟು ಜನ ಮನ ಗೆದ್ದಿರುವವರು ಸಿದ್ದರಾಮಯ್ಯ.. ಎಲ್ಲಾದ್ರೂ ಹೋದ್ರೆ ಅವ್ರನ್ನ ತಮ್ಮವರಂತೆ ನೋಡುವ ಬಳಗವಿದೆ. ಸಿದ್ದರಾಮಯ್ಯ ಅವರು ಕೂಡ ಹಾಗೇನೇ. ಜನರ ಜೊತೆ ಹೆಚ್ಚು ಮಿಂಗಲ್ ಆಗ್ತಾರೆ.
ಇದೀಗ ಅವರ ವಿಡಿಯೋವೊಂದು ವೈರಲ್ ಆಗಿದ್ದು, ಅವರ ಫಾಲೋವರ್ಸ್ ಫುಲ್ ಖುಷಿ ಪಟ್ಟಿದ್ದಾರೆ. ಅದು ಜಿಮ್ ನಲ್ಲಿ ದೇಹ ದಂಡಿಸುತ್ತಿರುವ ವಿಡಿಯೋ. ಎಲ್ಲರೂ ಒಂದು ಕ್ಷಣ ಶಾಕ್ ಆಗಿದ್ದಾರೆ.
ಸಿದ್ದರಾಮಯ್ಯ ಸದ್ಯ ಹುಬ್ಬಳ್ಳಿ ಪ್ರವಾಸದಲ್ಲಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ಉಪಚುನಾವಣಾ ಪ್ರಚಾರಕ್ಕೆ ತೆರಳಿರೋ ಸಿದ್ದರಾಮಯ್ಯ, ಹುಬ್ಬಳ್ಳಿಯಲ್ಲೇ ಖಾಸಗಿ ಹೊಟೇಲ್ ನಲ್ಲಿ ಉಳಿದುಕೊಂಡಿದ್ದಾರೆ. ಈ ಮಧ್ಯೆ ಬಿಡುವಿನ ವೇಳೆಯಲ್ಲಿ ದೇಹ ದಂಡನೆ ಮಾಡಿದ್ದಾರೆ.
ಖಾಸಗಿ ಹೊಟೇಲ್ ನಲ್ಲೇ ಜಿಮ್ ನಲ್ಲಿ ಪಾಲ್ಗೊಂಡಿದ್ದಾರೆ. ಇದನ್ನ ನೋಡಿದ ಜೊತೆಗಾರರು ಕೂಡ ಅರೆ ಕ್ಷಣ ಶಾಕ್ ಆಗಿದ್ದಾರೆ.. ಖುಷಿ ಪಟ್ಟಿದ್ದಾರೆ. ಫೋಟೋಸ್ ಎಲ್ಲೆಡೆ ವೈರಲ್ ಆಗಿದ್ದು, ಬೆಂಬಲಿಗರು, ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…