Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ.. ಡಿಕೆಶಿ ಮುಂದೊಂದು ದಿನ ಮುಖ್ಯಮಂತ್ರಿಯಾಗ್ತಾರೆ : ಭವಿಷ್ಯ ನುಡಿದ ದ್ವಾರಕನಾಥ್

---Advertisement---

 

ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ವಿಚಾರವೇ ಚರ್ಚಿತ ವಿಷಯವಾಗಿದೆ. ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೂ ಸಹ ಸಿಎಂ ಆಯ್ಕೆ ವಿಚಾರಕ್ಕೆ ಬಹಳ ಸಮಯ ತೆಗೆದುಕೊಂಡಿತ್ತು. ಬಳಿಕ ಸಿದ್ದರಾಮಯ್ಯ ಅವರು ಸಿಎಂ ಹುದ್ದೆ ಅಲಂಕರಿಸಿದರು. ಇದರ ನಡುವೆಯೂ ಡಿಕೆ ಶಿವಕುಮಾರ್ ಕೂಡ ಇದೇ ಅವಧಿಯಲ್ಲಿ ಸಿಎಂ ಆಗಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದೀಗ ಜ್ಯೋತಿಷಿ ದ್ವಾರಕನಾಥ್, ಡಿಕೆ ಶಿವಕುಮಾರ್ ಅವರ ಸಿಎಂ ಕನಸಿನ ಬಗ್ಗೆ ಭವಿಷ್ಯ ನುಡಿದ್ದಾರೆ.

ಸದ್ಯಕ್ಕೆ ಸರ್ಕಾರ ಸೇಫ್ ಆಗಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ. ಡಿಕೆ ಶಿವಕುಮಾರ್ ಮುಂದೊಂದು ದಿನ ಸಿಎಂ ಆಗಲಿದ್ದಾರೆ. ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಸರ್ಕಾರ ಬೀಳುತ್ತದೆ ಎಂಬ ಮಾತುಗಳನ್ನು ಹೇಳುತ್ತಾರೆ. ಆದರೆ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಡಿಕೆ ಶಿವಕುಮಾರ್ ಸಿಎಂ ಆಗುವುದಕ್ಕೆ ಸ್ವಲ್ಪ ಸಮಯಬೇಕಾಗುತ್ತದೆ ಎಂದು ಡಿಕೆ ಶಿವಕುಮಾರ್ ಅವರ ಆಧ್ಯಾತ್ಮಿಕ ಗುರುಗಳಾದ ಜ್ಯೋತಿಷಿ ದ್ವಾರಕನಾಥ್ ಭವಿಷ್ಯ ನುಡಿದಿದ್ದಾರೆ.

ಶಿವಕುಮಾರ್ ಮೇಲೆ ಅತ್ಯಂತ ಪ್ರೀತಿ ಇದೆ. ಅವರನ್ನು ಕಂಡರೆ ತುಂಬಾ ಇಷ್ಟ. ಮುಂದೊಂದು ದಿನ ಮುಖ್ಯಮಂತ್ರಿಯಾಗಿ ರಾಜ್ಯ ಆಳುವುದಕ್ಕೆ ಅವಕಾಶ ಇದೆ. ಸ್ವಲ್ಪ ಸಮಯ ಬೇಕು, ಸಮಯ ಬರಬೇಕು. ನನ್ನ ಶಿಷ್ಯ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾನೆಯೇ? ಎನ್ನುವ ಸಂಶಯ ಎಲ್ಲರಲ್ಲೂ ಇದೆ. ಮುಖ್ಯಮಂತ್ರಿ ಆಗಬೇಕಾದರೆ ಸುತ್ತಮುತ್ತ ಶುದ್ಧ ಮನಸ್ಸುಗಳನ್ನುಇಟ್ಟುಕೊಂಡು ಶಾಸಕರ ವಿಶ್ವಾಸಗಳಿಸಬೇಕು. ಶಿವಕುಮಾರ್ ಅವರೇ ನಿಮ್ಮ ಹೆಸರು ಗೊತ್ತಾಗಬೇಕಾದರೆ ಎಲ್ಲಾ ಕಡೆ ಸಂಚಾರ ನಡೆಸಬೇಕು. ಕಾರ್ಯಕರ್ತರೇ ‌ಮುಖ್ಯ, ಕಾರ್ಯಕರ್ತರ ವಿಶ್ವಾಸ ಗಳಿಸಿ, ಪ್ರಸ್ತುತ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಬದಲಾವಣೆ ಆಗುತ್ತಾರೆ ಎನ್ನುವುದು ಸಲ್ಲದ ಮಾತು ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment