ಮೈಸೂರು : ಪ್ರಧಾನಿ ನರೇಂದ್ರ ಮೋದಿ ಡೀಸೆಲ್ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ತಮ್ಮ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಕಡಿತಗೊಳಿಸಿರುವ ಕ್ರಮ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರ ಈ ಕ್ರಮ ಕೇವಲ ತಾತ್ಕಾಲಿಕದ್ದು. ಇದು ಸಮಸ್ಯೆಗೆ ಶಾಶ್ವತ ಪರಿಹಾರವಲ್ಲ. ಇಂಧನ ಸಮಸ್ಯೆ ಕುರಿತಾಗಿ ಇತರೆ ದೇಶಗಳೊಂದಿಗೆ ಚರ್ಚೆ ನಡೆಸಿ ಒಮ್ಮತದ ನಿರ್ಧಾರ ಕೈಗೊಳ್ಳುವುದು ಹೆಚ್ಚು ಸೂಕ್ತ” ಎಂದು ಹೇಳಿದರು.
ಸಚಿವ ಸಂಪುಟ ಪುನರ್‌ರಚನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, “ಸಂಪುಟ ಪುನರ್‌ರಚನೆ ಮಾಡುವ ಉದ್ದೇಶ ಇದೆ. ಆದರೆ ಮೇ 15ರಂದು ದೆಹಲಿಗೆ ಹೋಗುವ ಕಾರ್ಯಕ್ರಮ ಇಲ್ಲ.
ಹೈಕಮಾಂಡ್ ನಾಯಕರು ಕರೆದರೆ ಮಾತ್ರ ದೆಹಲಿಗೆ ಭೇಟಿ ನೀಡುತ್ತೇನೆ” ಎಂದು ಸ್ಪಷ್ಟಪಡಿಸಿದರು.ಇನ್ನೂ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಿರ್ವಹಿಸಲು ವಿಫಲವಾಗಿದೆ. ಇದರ ಪರಿಣಾಮ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ” ಎಂದು ಆರೋಪಿಸಿದರು.
ಸಿಎಂ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಸಚಿವ ಸಂಪುಟ ಪುನರ್‌ರಚನೆ ಕುರಿತು ಕಾಂಗ್ರೆಸ್ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








