ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿಯ ತೂಗುಗತ್ತಿಯಲ್ಲಿಯೇ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ. ಅದು 500 ಕೋಟಿ ಕಿಕ್ ಬ್ಯಾಕ್ ಆರೋಪವದು. ಈ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕೆಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಅವರು ರಾಜ್ಯಪಾಲರಾದ ಥಾವರ್ ಚಂದ್ ಅವರಿಗೆ ಮನವಿ ಮಾಡಿದ್ದಾರೆ.
ಅಷ್ಟಕ್ಕೂ ಏನಿದು ಪ್ರಕರಣ, 2015ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ಎಂಟು ಗಣಿ ಗುತ್ತಿಗೆ ನವೀಕರಣ ಮಾಡಿದ್ದರು. ಹರಾಜು ಹಾಕುವ ಬದಲಿಗೆ ನವೀಕರಣ ಮಾಡಿದ್ದರು. ಗಣಿ ಕಂಪನಿಗಳ ಲೈಸೆನ್ಸ್ ಕೂಡ ನವೀಕರಣ ಮಾಡಲಾಗಿತ್ತು. ಆ ಲೈಸೆನ್ಸ್ ಎಲ್ಲಾ ಸಾಕಷ್ಟು ವರ್ಷಗಳಿಂದ ಬಾಕಿ ಇದ್ದವೇ ಆಗಿದ್ದವು. ಆ ಲೈಸೆನ್ಸ್ ಗಳನ್ನ ಅಂದಿನ ಸರ್ಕಾರದಲ್ಲಿ ನವೀಕರಣ ಮಾಡಿಕೊಡಲಾಗಿತ್ತು. ಹಾಗೇ ಅಂದು ನವೀಕರಣ ಮಾಡಿದ್ದಕ್ಕೆ ಕಿಕ್ ಬ್ಯಾಕ್ ಆರೋಪ ಅವರ ಮೇಲೆ ಬಂದಿದೆ.
ಸುಮಾರು 500 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆಂದು ರಾಮಮೂರ್ತಿ ಗೌಡ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲ ಸಿದ್ದರಾಮಯ್ಯ ಅವರ ನಿರ್ಧಾರದಿಂದ ಸರ್ಕಾರಕ್ಕೆ ಐದು ಸಾವಿರ ಕೋಟಿ ನಷ್ಟವಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸಿದ್ದರಾಮಯ್ಯ ಅವರನ್ನು ಪ್ರಾಸಿಕ್ಯೂಷನ್ ಗೆ ಒಳಪಡಿಸಲು ಅನುಮತಿ ನೀಡಿ ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಸೆಕ್ಷನ್ 7, 9, 11, 12 ಮತ್ತು 15 ಅಡಿ ಪ್ರಾಸಿಕ್ಯೂಚನ್ಗೆ ಅನುಮತಿ ಕೊಡಿ ಎಂದು ಕೇಳಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











