ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಎಚ್ ವಿಶ್ವನಾಥ್ ಯಾವಾಗಲೂ ಕಿಡಿಕಾರುತ್ತಿರಿತ್ತಾರೆ. ಆದರೆ ಇದೀಗ ಮಗ ಸಿದ್ದರಾಮಯ್ಯ ಪರವಾಗಿ ನಿಂತಿದ್ದಾರೆ. ಅವರನ್ನೇ ಹೊಗಳುತ್ತಿದ್ದಾರೆ. ಸಿದ್ದರಾಮಯ್ಯ ಹೊಳೆಯುವ ವಜ್ರವಿದ್ದಂತೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರಿಗೆ 75 ವರ್ಷಗಳು ತುಂಬುತ್ತಿರುವ ಹಿನ್ನೆಲೆ, ಕಾರ್ಯಕರ್ತರು, ಬೆಂಬಲಿಗರು ಸಿದ್ದರಾಮೋತ್ಸವ ಮಾಡಲು ಸಜ್ಜಾಗಿದ್ದಾರೆ. ಅದರ ಪೂರ್ವಭಾವಿ ಸಭೆ ಇಂದು ಮೈಸೂರಿನಲ್ಲಿ ನಡೆದಿದೆ. ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ಕೂಡ ಭಾಗಿಯಾಗಿದ್ದಾರೆ. ಸಿದ್ದರಾಮೋತ್ಸವಕ್ಕೆ ಜನರನ್ನು ಸೇರಿಸುವ ಹೊಣೆ ಹೊತ್ತರು.
ಈ ಬಗ್ಗೆ ಮಾತನಾಡಿದ ಅಮಿತ್, ನಾನು ಜಿಲ್ಲಾ ಪಂಚಾಯತ್ ನಲ್ಲಿ ಗೆಲ್ಲಲು ಸಿದ್ದರಾಮಯ್ಯ ಕಾರಣ. ಅಂದು ನನ್ನ ಪರ ಪ್ರಚಾರಕ್ಕೆ ಬಂದು ನನ್ನನ್ನು ಗೆಲ್ಲಿಸಿದರು. ಸಿದ್ದರಾಮಯ್ಯ ಹೊಳೆಯುವ ವಜ್ರವಿದ್ದಂತೆ. ಕುರುಬ ಸಮುದಾಯದವರು ಮತ್ತಷ್ಟು ಹೊಳಪು ನೀಡುವ ಕೆಲಸ ಮಾಡಬೇಕು. ಶಾಸಕ ಮಂಜುನಾಥ್, ಮುಖಂಡ ರವಿಶಂಕರ್ ಜೊತೆ ನಿಂತು ಕೆಲಸ ಮಾಡುತ್ತೇನೆ ಎಂದಿದ್ದಾರೆ. ಅಮಿತ್ ಅವರ ತಂದೆ ಎಚ್ ವಿಶ್ವನಾಥ್ ಸದಾ ಸಿದ್ದರಾಮಯ್ಯ ಅವರನ್ನು ಟೀಕೆ ಮಾಡುತ್ತಲೆ ಇರುತ್ತಾರೆ. ಇದೀಗ ಮಗ ಸಿದ್ದರಾಮಯ್ಯ ಪರ ನಿಂತಿದ್ದು, ಮನೆಯಲ್ಲಿಯೇ ಪರ ವಿರೋಧ ಸೃಷ್ಟಿಯಾಗಿದೆ.