Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯರೀಗ ದೇಶದ ಅತ್ಯಂತ ಹಿರಿಯ ಸಿಎಂ

---Advertisement---

ಬೆಂಗಳೂರು: ಸಿದ್ದರಾಮಯ್ಯ ಅವರು ಸಿಎಂ ಆಗಿ ಈಗಾಗಲೇ ದಾಖಲೆಯೊಂದನ್ನ ಬರೆದಿದ್ದಾರೆ. ಹೆಚ್ಚು ವರ್ಷಗಳ ಕಾಲ ಸಿಎಂ ಆಗಿ ಆಡಳಿತ ನಡೆಸಿದವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ದೇಶದ ಹಿರಿಯ ಸಿಎಂ ಅಂದ್ರೆ ಗೂಗಲ್ ನಲ್ಲೂ ಸಿದ್ದರಾಮಯ್ಯ ಅವರ ಹೆಸರನ್ನೇ ಉಲ್ಲೇಖಿಸುವಂತ ಸಾಧನೆ ಮಾಡಿದ್ದಾರೆ. 77 ವರ್ಷದ ಸಿದ್ದರಾಮಯ್ಯ ಅವರು ದೇಶದ ಅತ್ಯಂತ ಹಿರಿಯ ಸಿಎಂ ಆಗಿ ಹೊರ ಹೊಮ್ಮಿದ್ದಾರೆ. ಈ ಮೊದಲು ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು ಈ ದಾಖಲೆ ಸರಿಗಟ್ಟಿದ್ದರು.

82 ವರ್ಷದ ಪಿಣರಾಯಿ ವಿಜಯನ್ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಆಗಿದ್ದರು. ಪಂಚರಾಜ್ಯ ಚುನಾವಣೆಯಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಸೋಲು ಅನುಭವಿಸಿದ್ದರು. ಇದೀಗ ವಿಜಯನ್ ರಾಜೀನಾಮೆಯನ್ನು ನೀಡಿದ್ದಾರೆ. ಎರಡನೇ ಸ್ಥಾನದಲ್ಲಿ 77 ವರ್ಷದ ಸಿದ್ದರಾಮಯ್ಯ ಅವರು ಹಿರಿಯ ಸಿಎಂ ಆಗಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೊದಲು ಸಿಎಂ ಆಗಿದ್ದ ದೇವರಾಜ್ ಅರಸು ಅವರ ದಾಖಲೆಯನ್ನ ಸಿದ್ದರಾಮಯ್ಯ ಅವರು ಈಗಾಗಲೇ ಸರಿಗಟ್ಟಿದ್ದಾರೆ. 2,792 ದಿನಗಳ ಕಾಲ ದೇವರಾಜ್ ಅರಸು ಅವರು ಸಿಎಂ ಆಗಿ ಆಳ್ವಿಕೆ ನಡೆಸಿದ್ದರು.

ಆ ದಾಖಲೆಯನ್ನ ಸಿದ್ದರಾಮಯ್ಯ ಅವರು ಮುರಿದಿದ್ದಾರೆ. ಈ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು, ಮಿಜೋರಂನ ಲಾಲ್ ದುಹೋಮಾ, ನಾಗಲ್ಯಾಂಡ್ ನ ನೆಪ್ಪು ರಿಯೋ, ಪುದುಚೇರಿಯ ರಂಗಸ್ವಾಮಿ ಕೂಡ ಇದ್ದಾರೆ. ಅರುಣಾಚಲ ಪ್ರದೇಶದ ಪೇಮಾ ಖಂಡು ಅವರು ಕೂಡ ಇದ್ದಾರೆ. ಸದ್ಯ ಸಿದ್ದರಾಮಯ್ಯ ಅವರು ದಾಖಲೆ ಮೇಲೆ ದಾಖಲೆ ಮಾಡ್ತಿದ್ದಾರೆ. ಆದರೆ ರಾಜ್ಯದಲ್ಲಿ ಸಿಎಂ ಬದಲಾವಣೆಯ ಗೊಂದಲವೂ ಹಾಗೇ ಹೊಗೆಯಾಡುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...