Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರದಿಂದ ಶೂ, ಸಾಕ್ಸ್ ಯೋಜನೆ ನಿಲ್ಲಿಸುವ ಚಿಂತನೆಗೆ ಸಿದ್ದರಾಮಯ್ಯ ಆಕ್ರೋಶ

Facebook
Twitter
Telegram
WhatsApp

ಬೆಂಗಳೂರು: ಸರ್ಕಾರದಿಂದ ಶೂ, ಸಾಕ್ಸ್ ಯೋಜನೆ ನಿಲ್ಲಿಸುವ ಚಿಂತನೆ ಹಿನ್ನೆಲೆ, ಸರ್ಕಾರದ ನಡೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡುವ ಮ‌ೂಲಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. #SaveSchools ಹ್ಯಾಷ್ ಟ್ಯಾಗ್ ಬಳಸುವ ಮೂಲಕ ಸರಣಿ ಟ್ವೀಟ್ ಮಾಡಿದ್ದಾರೆ.

ಕಳೆದೆರಡು ಶೈಕ್ಷಣಿಕ ವರ್ಷಗಳಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಸೈಕಲ್, ಶೂ ಮತ್ತು ಸಾಕ್ಸ್ ಗಳನ್ನು ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಿದೆಯಂತೆ. ಹಿಂದಿನ ವರ್ಷಗಳಲ್ಲಿ ಕೊರೊನಾ ಕಾರಣ ನೀಡಿದ್ದ ಸರ್ಕಾರ ಈ ವರ್ಷ 40% ಕಮಿಷನ್ ನಿಂದಾಗಿ ಖಾಲಿಯಾಗಿರುವ ಖಜಾನೆ ತೋರಿಸುತ್ತಿದೆ. ಒಂದೆಡೆ ರಾಜ್ಯ ಸರ್ಕಾರದ ಸಚಿವರು, ಆಡಳಿತ ಪಕ್ಷದ ನಾಯಕರು ಮತ್ತು ಅಧಿಕಾರಿಗಳ ದುಷ್ಟಕೂಟ ಕಮಿಷನ್ ದಂಧೆಯಲ್ಲಿ ತೊಡಗಿಕೊಂಡು ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದ್ದರೆ, ಇನ್ನೊಂದೆಡೆ ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ, ಸೈಕಲ್, ಶೂ, ಸಾಕ್ಸ್ ನೀಡದೆ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ.

ಇಂದಿನ ದಿನದವರೆಗೆ ಶಾಲಾ ಮಕ್ಕಳಿಗೆ ನೀಡಬೇಕಾಗಿದ್ದ ಪಠ್ಯಪುಸ್ತಕಗಳ ಬಗ್ಗೆ ಖಚಿತ ತೀರ್ಮಾನವನ್ನು ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕೆಲವು ಶಾಲೆಗಳಿಗೆ ಹಳೆಯ ಪಠ್ಯ, ಇನ್ನು ಕೆಲವು ಶಾಲೆಗಳಿಗೆ ಹೊಸ ಪಠ್ಯ, ಉಳಿದ ಶಾಲೆಗಳಿಗೆ ಪಠ್ಯವೇ ಇಲ್ಲದಂತಹ ದುಸ್ಥಿತಿ ಇದೆ. ಕೊರೊನಾ ಕಾಲದ ಕಲಿಕಾ ಅಂತರವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ “ವಿದ್ಯಾಪ್ರವೇಶ” ಮತ್ತು “ಕಲಿಕಾ ಚೇತರಿಕೆ” ಎಂಬ ಎರಡು ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ.

ಆದರೆ ಇದಕ್ಕೆ ಸಂಬಂಧಿಸಿದ ಕಲಿಕಾ ಹಾಳೆಗಳನ್ನು ಕೂಡಾ ಪೂರೈಸಲು ಸರ್ಕಾರದಲ್ಲಿ ದುಡ್ಡಿಲ್ಲ. ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿರುವ ಕಲಿಕಾ ಹಾಳೆಗಳನ್ನು ಶಿಕ್ಷಕರು ಸ್ವಂತ ಖರ್ಚಿನಿಂದ ಡೌನ್ ಲೋಡ್ ಮಾಡಿಕೊಂಡು, ಜೆರಾಕ್ಸ್ ಪ್ರತಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇಷ್ಟೊಂದು ಗತಿಗೇಡಿನ ಸರ್ಕಾರ ಹಿಂದೆ ಇರಲಿಲ್ಲ, ಮಂದೆ ಬರಲಾರದು. ಸರ್ಕಾರ ವಿದ್ಯಾರ್ಥಿನಿಯರಿಗೆ ಸೈಕಲ್ ಗಳನ್ನು ನೀಡುವ ಯೋಜನೆ ಹಿಂದಿನ ಮುಖ್ಯಮಂತ್ರಿ ಬಿಎಸ್ವೈ ಅವರದ್ದು, ಆ ಯೋಜನೆಯನ್ನು ಕೂಡಾ ಸ್ಥಗಿತಗೊಳಿಸುವ ಮೂಲಕ ಮುಖ್ಯಮಂತ್ರಿ ಬೊಮ್ಮಾಯಿ ಅವರು ಯಡಿಯೂರಪ್ಪನವರ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆಯೇ..?

ಶಾಲಾ ಬಡ ಮಕ್ಕಳಿಗಾಗಿ ನಮ್ಮ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಒಂದೊಂದಾಗಿ ಸ್ಥಗಿತಗೊಳಿಸಲು ಸರ್ಕಾರ ಹೊರಟಿದೆ. ವಿದ್ಯಾಸಿರಿ ಯೋಜನೆಗೆ ಹಣ ನೀಡುತ್ತಿಲ್ಲ, ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿ ಊಟಕ್ಕೂ ಕಲ್ಲು ಹಾಕುತ್ತಿದೆ. ಈಗ ಸೈಕಲ್, ಶೂ, ಸಾಕ್ಸ್ ಗಳನ್ನು ಕೂಡಾ ಕಿತ್ತುಕೊಳ್ಳುತ್ತಿದೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮದಕರಿಪುರದಲ್ಲಿ ಕೊಲ್ಲಾಪುರದಮ್ಮ ಜಾತ್ರೆ | ಕೋಣ ಗುದ್ದಿ ಓರ್ವ ಮೃತ

  ಸುದ್ದಿಒನ್, ಚಿತ್ರದುರ್ಗ, ಮೇ. 01 : ಜಾತ್ರೆಯಲ್ಲಿ ದೇವಿಗೆ ಕೋಣ ಬಲಿ ಕೊಡುವ ವೇಳೆ ಕೊಣ ಗುದ್ದಿ ಕೊಲ್ಲಪ್ಪ (53 ವರ್ಷ) ಎಂಬಾತ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಮದಕರಿ ಪುರ ಗ್ರಾಮದಲ್ಲಿ ಇಂದು

ರಾಹುಲ್ ಚೌದ್ರಿ ನಿಧನ

  ಹಿರಿಯೂರು, ಸುದ್ದಿಒನ್, ಮೇ. 01 : ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ರಾಹುಲ್ ಚೌದ್ರಿ (34) ಅವರು ಅನಾರೋಗ್ಯದಿಂದ ಇಂದು(ಬುಧವಾರ) ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು

ಹೆಚ್ಚು ನೀರು ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ : ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಅದಕ್ಕಾಗಿಯೇ ವೈದ್ಯರು ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಲು ಹೇಳುತ್ತಾರೆ. ಹೆಚ್ಚು ನೀರು ಇರುವ ಹಣ್ಣುಗಳು ಮತ್ತು ಆಹಾರಗಳನ್ನು

error: Content is protected !!