Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೆಣಗುತ್ತಿದ್ದಾರೆ : ಕೇಂದ್ರ ಮಂತ್ರಿ ಭಗವಂತ್‍ಖೂಬಾ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.24 : ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರಚಂಡ ಬಹುಮತ ಸಿಗಲಿದೆ ಎಂದು ಕೇಂದ್ರ ಮಂತ್ರಿ ಭಗವಂತ್‍ಖೂಭ ಭವಿಷ್ಯ ನುಡಿದರು.

ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೊರಟಿದ್ದ ಭಗವಂತ್‍ಖೂಬ ಮಾರ್ಗ ಮಧ್ಯೆ ನಗರದ ಹೊರವಲಯ ಸೀಬಾರದ ಸಮೀಪವಿರುವ ಮೇದಾರ ಕೇತೇಶ್ವರ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕ ವಿಧಾನಸಭೆ ಚುನಾವಣಾ ಪೂರ್ವದಲ್ಲಿಯೇ ಜನತೆಗೆ ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಖರಾ ದೇಶದ ಬೇರೆ ಬೇರೆ ರಾಜ್ಯಗಳ ಜನತೆಗೂ ಗೊತ್ತಾಗಿರುವುದರಿಂದ ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಹೀನಾಯ ಸೋಲಾಗಲಿದೆ. ಸುಳ್ಳು ಗ್ಯಾರೆಂಟಿಗಳಿಂದ ಕರ್ನಾಟಕದ ಜನ ನಿರಾಸೆಯಾಗಿದ್ದಾರೆ.

ಸತ್ಯಾಸತ್ಯತೆ ಬೇರೆ ರಾಜ್ಯಗಳಿಗೆ ಗೊತ್ತಾಗಿದೆ. ಇನ್ನು ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಆಟ ನಡೆಯುವುದಿಲ್ಲ. ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೆಣಗುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದರು.

ದೇಶದ ಪ್ರಧಾನಿ ನರೇಂದ್ರಮೋದಿರವರ ಪಾರದರ್ಶಕ ಆಡಳಿತ ಈ ಬಾರಿಯ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ.ಗೆ ವರದಾನವಾಗಲಿದೆ ಎಂದು ಹೇಳಿದರು.
ಬಸವಪ್ರಭು ಮೇದಾರ ಕೇತೇಶ್ವರಸ್ವಾಮೀಜಿ ಹಾಗೂ ಅಪಾರ ಭಕ್ತರು ಈ ಸಂದರ್ಭದಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment