ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ನವೆಂಬರ್.24 : ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರಚಂಡ ಬಹುಮತ ಸಿಗಲಿದೆ ಎಂದು ಕೇಂದ್ರ ಮಂತ್ರಿ ಭಗವಂತ್‍ಖೂಭ ಭವಿಷ್ಯ ನುಡಿದರು.

ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೊರಟಿದ್ದ ಭಗವಂತ್‍ಖೂಬ ಮಾರ್ಗ ಮಧ್ಯೆ ನಗರದ ಹೊರವಲಯ ಸೀಬಾರದ ಸಮೀಪವಿರುವ ಮೇದಾರ ಕೇತೇಶ್ವರ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕ ವಿಧಾನಸಭೆ ಚುನಾವಣಾ ಪೂರ್ವದಲ್ಲಿಯೇ ಜನತೆಗೆ ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಖರಾ ದೇಶದ ಬೇರೆ ಬೇರೆ ರಾಜ್ಯಗಳ ಜನತೆಗೂ ಗೊತ್ತಾಗಿರುವುದರಿಂದ ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಹೀನಾಯ ಸೋಲಾಗಲಿದೆ. ಸುಳ್ಳು ಗ್ಯಾರೆಂಟಿಗಳಿಂದ ಕರ್ನಾಟಕದ ಜನ ನಿರಾಸೆಯಾಗಿದ್ದಾರೆ.
ಸತ್ಯಾಸತ್ಯತೆ ಬೇರೆ ರಾಜ್ಯಗಳಿಗೆ ಗೊತ್ತಾಗಿದೆ. ಇನ್ನು ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಆಟ ನಡೆಯುವುದಿಲ್ಲ. ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೆಣಗುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದರು.
ದೇಶದ ಪ್ರಧಾನಿ ನರೇಂದ್ರಮೋದಿರವರ ಪಾರದರ್ಶಕ ಆಡಳಿತ ಈ ಬಾರಿಯ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ.ಗೆ ವರದಾನವಾಗಲಿದೆ ಎಂದು ಹೇಳಿದರು.
ಬಸವಪ್ರಭು ಮೇದಾರ ಕೇತೇಶ್ವರಸ್ವಾಮೀಜಿ ಹಾಗೂ ಅಪಾರ ಭಕ್ತರು ಈ ಸಂದರ್ಭದಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















