Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯನವರು ದೇಶದ ನಂ.1 ಮುಖ್ಯಮಂತ್ರಿಯಾಗಿದ್ದಾರೆ : ಎಚ್. ಆಂಜನೇಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜ. 01 :  2023ರಲ್ಲಿ ಮತದಾರರು ವಿಧಾನ ಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕೈಹಿಡಿಯುವುದರ ಮೂಲಕ ಅಧಿಕಾರಕ್ಕೆ ತಂದಿದ್ದಾರೆ. ಇದೇ ರೀತಿ 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿಯೂ ಸಹಾ ಮತದಾರರು ಕಾಂಗ್ರೆಸ್ ಪಕ್ಷವನ್ನು ಕೈಹಿಡಿಯುವುದರ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಈ ನಿಟ್ಟಿನಲ್ಲಿ ಪಕ್ಷದ ಮುಖಂಡರು ಕ್ಷೇತ್ರವಾರು ಪ್ರವಾಸವನ್ನು ಮಾಡುವುದರ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವರು ಕೆಪಿಸಿಸಿ ಉಪಾಧ್ಯಕ್ಷರಾದ  ಎಚ್. ಆಂಜನೇಯ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023 ಕಾಂಗ್ರೆಸ್ಸಿಗೆ ಅಧಿಕಾರ ಕೊಟ್ಟ ವರ್ಷ. ಬಿಜೆಪಿ ಆಡಳಿತ ವೈಫಲ್ಯ, ಅಭದ್ರತೆ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಆಡಳಿತದಿಂದ ಜನರು ಬೇಸತ್ತು ಕಾಂಗ್ರೆಸ್ಸಿಗೆ ಸ್ಪಷ್ಟ ಜನಾದೇಶ ನೀಡಿದ್ದರು. ಚುನಾವಣೆ ಭರವಸೆಯಂತೆ ಐದು ಗ್ಯಾರೆಂಟಿ ಜಾರಿ ಮಾಡುವ ಮೂಲಕ ಬಡವರ ಪರ ಇರುವ ಸರ್ಕಾರ ಎಂಬ ಹೆಗ್ಗಳಿಕೆಗೆ ಕಾರಣವಾಗಿದ್ದೇವೆ ಬಿಜೆಪಿಯವರು ಗ್ಯಾರೆಂಟಿಗಳಿಂದ ಕರ್ನಾಟಕ ಪಾಕಿಸ್ತಾನ ಆಗುತ್ತದೆ ಎನ್ನುವ ಆರೋಪ ಮಾಡಿದ್ದರು. ಆದರೆ, 14 ಬಜೆಟ್ ಮಂಡನೆ ಮಾಡಿರುವ ಸಿದ್ದರಾಮಯ್ಯ ಆರ್ಥಿಕ ತಜ್ಞ, ಅವರು ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದಾರೆ’ ಎಂದು ತಿಳಿಸಿದರು.

ಬಿಜೆಪಿ 2014 ರಲ್ಲಿ ಕಾಂಗ್ರೆಸ್ ಮೇಲೆ ಇಲ್ಲಸಲ್ಲದ ಆಪಾದನೆ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಹತ್ತು ವರ್ಷ ಕಳೆಯಿತು. ಈವರೆಗೆ ಯಾವುದೇ ಬೆಲೆ ನಿಯಂತ್ರಣ ಮಾಡಲಿಲ್ಲ. ಈ ಹಿನ್ನೆಲೆಯಲ್ಲಿ ಬಡವರ ಕಷ್ಟ ಅರಿತು, ಎಲ್ಲರ ಮನೆಗಳಿಗೆ ಉಚಿತ ವಿದ್ಯುತ್, ಅಕ್ಕಿ, ನಿರುದ್ಯೋಗಿಗಳಿಗೆ ಯುವನಿಧಿ, ಗೃಹಲಕ್ಷ್ಮೀ ಯೋಜನೆ ಕೊಟ್ಟಿದ್ದೇವೆ’ ಎಂದ ಅವರು ದೇಶದಲ್ಲಿ ಸಿದ್ದರಾಮಯ್ಯ ನಂ.1 ಮುಖ್ಯಮಂತ್ರಿಗಳಾಗಿದ್ದಾರೆ. 14 ಭಾರಿ ಆಯವ್ಯವನ್ನು ಮಂಡಿಸುವುದರ ಮೂಲಕ ಉತ್ತಮ ಅರ್ಥಿಕ ತಜ್ಞರಾಗಿದ್ದಾರೆ. 2014ರಲ್ಲಿ ಬಿಜೆಪಿ ಸುಳ್ಳುಗಳನ್ನು ಹೇಳುವುದರ ಮೂಲಕ ಅಧಿಕಾರವನ್ನು ಪಡೆದು ಬೆಲೆ ಏರಿಕೆಯನ್ನು ನಿಯಂತ್ರಿಸಲಾಗದೆ ಜನತೆಗೆ ಕಷ್ಟಗಳನ್ನು ನೀಡಿತು ಎಂದರು.

ಮಾಜಿ ಸಂಸದರು,ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಬಿ.ಎನ್.ಚಂದ್ರಪ್ಪ ಮಾತನಾಡಿ, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುಖ್ಯವಲ್ಲ. ಪಕ್ಷದ ಗೆಲುವು ಮಾತ್ರ ಮುಖ್ಯ. ಈ ಉದ್ದೇಶದಿಂದ ಪಕ್ಷವನ್ನು ಪುನಃ ತಳಮಟ್ಟದಿಂದ ಸಂಘಟಿಸುವ ಕಾರ್ಯ ನಡೆಯುತ್ತಿದೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ 7ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಜತೆಗೆ ಪಕ್ಷದ ಹೈಕಮಾಂಡ್ ಜಿಲ್ಲೆಯ ಮೂವರಿಗೆ ಪದಾಧಿಕಾರಿಗಳ ಹುದ್ದೆ ನೀಡಿದೆ. ಮುಂಬರುವ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಬೇಕು ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 136 ಸ್ಥಾನ ಬಂದ ಹಿನ್ನೆಲೆಯಲ್ಲಿ ಅದರ ಪ್ರಭಾವ ತೆಲಂಗಾಣದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜ್ಯದ ಜನರ ಮೇಲೆ ಜವಾಬ್ದಾರಿ ಇದೆ. ನಾಗಪುರ ಆರ್‍ಎಸ್‍ಎಸ್ ಕೇಂದ್ರ ಸ್ಥಾನವಾಗಿದ್ದರು ಸಹ ಅಲ್ಲಿ ನಡೆದಎಐಸಿಸಿ ಸಂಸ್ಥಾಪನಾ ದಿನಾಚರಣೆ ನಿರೀಕ್ಷೆ ಮೀರಿ ಯಶಸ್ಸು ಕಂಡಿತು. ಜನರಿಗೆ ಎಲ್ಲವೂ ಅರ್ಥವಾಗುತ್ತಿದೆ’ ಎಂದರು.

ಸಚಿವರಾದ ಮಹಾದೇವಪ್ಪ ಲೋಕಸಭೆ ಕ್ಷೇತ್ರದ ವೀಕ್ಷಕರಾಗಿ ಬಂದಿದ್ದಾಗ ಹೊರಗಿನವರು ಎಂದು ನನಗೆ ನಮ್ಮ ಪಕ್ಷದ ಯಾವ ಕಾರ್ಯಕರ್ತರು ವಿರೋಧ ಮಾಡಿಲ್ಲ ಅಲ್ಲಿ ಗಲಾಟೆ ಮಾಡಿದವರಲ್ಲಿ ನಮ್ಮ ಕಾರ್ಯಕರ್ತರು ಇರಲಿಲ್ಲ ಎಂದ ಅವರು ಲೋಕಸಭೆ ಚುನಾವಣೆಗೆ ಬಹಳಷ್ಟು ಜನ ಆಕಾಂಕ್ಷಿಗಳಿದ್ದೇವೆ. ಇಲ್ಲಿ ಯಾರು ಅಭ್ಯರ್ಥಿ ಎನ್ನುವುದಕ್ಕಿಂತ ಪಕ್ಷ ಗೆಲ್ಲಬೇಕು. ಕಾಂಗ್ರೆಸ್ ಕೇಂದ್ರದಲ್ಲೂ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಸಂಪತ್ ಕುಮಾರ್, ಲಕ್ಷ್ಮೀಕಾಂತ್, ಪ್ರಕಾಶ್ ರಾಮನಾಯ್ಕ್, ಎನ್.ಡಿ.ಕುಮಾರ್ ಮತ್ತಿತರರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!