Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನಿ ಮೋದಿ ಭೇಟಿ ಮಾಡಿದ ಸಿದ್ದರಾಮಯ್ಯ : ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡಲು ಮನವಿ

---Advertisement---

 

ನವದೆಹಲಿ: ರಾಜ್ಯದಲ್ಲಿ ಬರದ ಪರಿಸ್ಥಿತಿ ಇರುವುದು ಗೊತ್ತಿರುವ ವಿಚಾರ. ಅದಕ್ಕಾಗಿ ಕೇಂದ್ರದಿಂದ ಪರಿಹಾರವನ್ನು ಕೇಳಲಾಗಿದೆ. ಆದರೂ ಯಾವುದೇ ರೀತಿಯ ಪರಿಹಾರ ಸಿಕ್ಕಿಲ್ಲ. ಇಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಬರ ಪರಿಹಾರ ನೀಡಲು ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ. ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್‌.ಡಿ.ಆರ್‌.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.

ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.

 

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment