‘ಕ್ರಿಯೆಗೆ ಪ್ರತಿಕ್ರಿಯೆ’ ಎಂಬ ಮೊಂಡುವಾದ ಮಂಡಿಸಬೇಡಿ : ಸಿದ್ದರಾಮಯ್ಯ

suddionenews
1 Min Read

ಬೆಳಗಾವಿ: ಇತ್ತೀಚೆಗೆ ಪ್ರತಿಷ್ಟಾಪನೆಯಾಗಿದ್ದ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನ ಎಂಇಎಸ್ ಪುಂಡರು ಧ್ವಂಸಗೊಳಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಇದೀಗ ಅದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ. @CMofKarnataka ಅವರು ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ‌ ಆದೇಶ ನೀಡಬೇಕು.

ಸಿಎಂ ಅವರೇ, ಇದಕ್ಕೆಲ್ಲ
‘ಕ್ರಿಯೆಗೆ ಪ್ರತಿಕ್ರಿಯೆ’ ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ. ಇದೇ ವೇಳೆ ಕನ್ನಡ ಬಂಧುಗಳು ಆವೇಶಕ್ಕೆ ಒಳಗಾಗದೆ,‌‌‌ ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು‌ ಬರಬೇಕೆಂದು‌
ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *