ಬೆಂಗಳೂರು: ಪ್ರಧಾನಿ ಕುರಿತಾದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರಂತ ಒಬ್ಬ ಮುಖ್ಯಮಂತ್ರಿ ಮೂರ್ಖತೆಯ ಮಾತನಾಡುವ ಮೂಲಕ ಅವರು ಬೇಜವಬ್ದಾರಿಯ ಮುಖ್ಯಮಂತ್ರಿ ಎಂಬುದನ್ನು ಸಾಬೀತು ಮಾಡಿದ್ದಾರೆ.
ಬಹುಶಃ ಇಡೀ ವಿಶ್ವವೇ ಕೊಂಡಾಡುವಂತ ಪ್ರಧಾನಿ ಮೋದಿ ಅವರು. ಅವರು ಅಧಿಕಾರ ವಹಿಸಿಕೊಂಡಾಗಿನಿಂದ ಇಲ್ಲಿಯವರೆಗೂ ಒಂದು ದಿನವೂ ರಜೆ ತೆಗೆದುಕೊಳ್ಳದೆ, ಕೆಲಸ ಮಾಡುತ್ತಿರಬೇಕಾದರೆ ಅಂತಹ ವ್ಯಕ್ತಿಯ ಬಗ್ಗೆ ಈ ರೀತಿಯ ಮಾತುಗಳನ್ನು ಆಡುವುದು ಸೂಕ್ತವಲ್ಲ. ಈ ರೀತಿಯ ಹೇಳಿಕೆಗಳನ್ನು ಇನ್ನಾದರೂ ನಿಲ್ಲಿಸಬೇಕು. ಈ ಹೇಳಿಕೆಯ ಬಗ್ಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.
ಪ್ರಧಾನಿಯ ಗಾಢ ನಿದ್ರೆ .. ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ
ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ.
ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಮೋದಿಯಿಂದ ಸದಾ ಪಲಾಯನ
– ಕೇಂದ್ರವು ಸರಿಯಾಗಿ ಅನುದಾನ ಕೊಡುತ್ತಿಲ್ಲ
– ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ
– ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲ…
ಮೋದಿ ಮಂತ್ರವಿಷ್ಟೇ ಕಡೆಗಣಿಸು. ನಿರ್ಲಕ್ಷಿಸು. ನಿದ್ರಿಸು. ಮತ್ತದನ್ನೇ ಪುನರಾವರ್ತಿಸು!
ಇನ್ನು ಬಿಜೆಪಿ ಸಂಸದರ ಮಂತ್ರ ಬಾಯಿಗೆ ಬೀಗ ಹಾಕಿಕೊಂಡಿರು. ಮೋದಿಯದ್ದೇ ಜಪ ಮಾಡಿಕೊಂಡಿರು. ಕನ್ನಡಿಗರ ನಂಬಿಕೆಗೆ ದ್ರೋಹ ಬಗೆಯುತ್ತಿರು. ಮೋದಿ ನಿಶ್ಚಿಂತೆಯಿಂದ ನಿದ್ರಿಸಲು ಮತ್ತದನ್ನೇ ಪುನರಾವರ್ತಿಸು! ಎದ್ದೇಳಿ, ಪ್ರಧಾನಮಂತ್ರಿಯವರೇ! ಕರ್ನಾಟಕದ ನ್ಯಾಯಯುತ ಪಾಲನ್ನು ಕೊಡಬೇಕಾದ ಸಮಯವಿದು ಎಂದು ಟ್ವೀಟ್ ಮಾಡಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…