ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಖಂಡಿಸಿ, ಇಂದು ಬಿಜೆಪಿ ಎಸ್ಸಿ ಮೋರ್ಚಾ ಪ್ರತಿಭಟನೆ ನಡೆಸುತ್ತಿದ್ದಾರೆ. ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಲಿತರು ಹೊಟ್ಟೆ ಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಈ ಹೇಳಿಕೆಯನ್ನು ಖಂಡಿಸಿ ಎಸ್ಸಿ ಮೋರ್ಚಾ ಪ್ರತಿಭಟನೆ ನಡೆಸುತ್ತಿದೆ. ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಛಲವಾದಿ ನಾರಾಯಣ ಸ್ವಾಮಿ, ಕುಡಚಿ ರಾಜೀವ್ ಭಾಗಿಯಾಗಿದ್ದಾರೆ. ಸಚಿವರು, ಶಾಸಕರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾತೆ.
ಪ್ರತಿಭಟನೆಯಲ್ಲಿ ಕುಡಚಿ ರಾಜೀವ್ ಆಕ್ರೋಶವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ಹೇಳಿಕೆ ಕೇವಲ ರಾಜಕೀಯ ಹೇಳಿಕೆಯಲ್ಲ. ಅಂಬೇಡ್ಕರ್ ಕೊಟ್ಟ ಹಕ್ಕನ್ನು ಕಿತ್ತುಕೊಳ್ಳುವ ಹೇಳಿಕೆ. ದಲಿತರು ಹೊಟ್ಟೆಪಾಡಿಗಾಗಿ ಆಂದೋಲನ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಹೊಟ್ಟೆಪಾಡಿಗಾಗಿ ಜೆಡಿಎಸ್ ತೊರೆದಿದ್ದು. ಹೊಟ್ಟೆಪಾಡಿಗಾಗಿ ಕಾಂಗ್ರೆಸ್ ಸೇರಿದ್ದು. ಸಿದ್ದರಾಮಯ್ಯ ಹೇಳಿಕೆಯಿಂದ ದಲಿತ ಸಮುದಾಯಕ್ಕೆ ನೋವಾಗಿದೆ. ಸಿದ್ದರಾಮಯ್ಯ ಆದಷ್ಟು ಬೇಗ ಕ್ಷಮೆ ಕೇಳಬೇಕು. ಇಲ್ಲಾಂದ್ರೆ ನಿಮ್ಮ ರಾಜಕೀಯ ಭವಿಷ್ಯಕ್ಕೆ ಒಳ್ಳೆಯದಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.