Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಭದ್ರತಾ ವೈಫಲ್ಯವೇ ಕಾರಣ ಎಂದು ಗುಡುಗಿದ ಸಿದ್ದರಾಮಯ್ಯ..!

---Advertisement---

ಬೆಂಗಳೂರು; ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ 26 ಮಂದಿ‌ ಬಲಿಯಾಗಿದ್ದಾರೆ. ಈ ದಾಳಿ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಗುಡುಗಿದ್ದಾರೆ. ಭದ್ರಯಾ ವೈಫಲ್ಯವೇ ಇದಕ್ಕೆ ಕಾರಣ ಎಂದು ಕೇಂದ್ರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇಂಟೆಲಿಜೆನ್ಸ್ ವಿಫಲವಾಗಿದೆ. ಭದ್ರತಾ ವೈಫಲ್ಯವೇ ಇದಕ್ಕೆ ಕಾರಣ ಎಂದಿದ್ದಾರೆ.

ಯಾವುದೇ ಜಾತಿ, ಧರ್ಮದವರಾಗಲಿ ಕೊಲ್ಲುವ ಕೆಲಸವನ್ನು ಮಾಡಬಾರದು. ಈ ಘಟನೆಯನ್ನ ನಾನು ಖಂಡಿಸುತ್ತೇನೆ. ಕರ್ನಾಟಕದವರಾದ ಭರತ್ ಹಾಗೂ ಮಂಜುನಾಥ್ ಎಂಬುವವರು ಮೃತ ಪಟ್ಟಿದ್ದಾರೆ. ನಾನು ಅಧಿಕಾರಿಗಳ ತಂಡ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಕಾಶ್ಮೀರಕ್ಕೆ ಕಳುಹಿಸಿಕೊಟ್ಟಿದ್ದೇನೆ. ಅಲ್ಲಿ ಯಾರಿದ್ದಾರೆ, ಅವರನ್ನೆಲ್ಲ ಸೇಫಾಗಿ ಕರೆದುಕೊಂಡು ಬನ್ನಿ ಅಂತ ಹೇಳಿದ್ದೇನೆ. ಮೃತರ ಪಾರ್ಥಿವ ಶರೀರವನ್ನು ಕರೆತರಲು ವಿಶೇಷ ವಿಮಾನದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ದಾಳಿ ಪ್ಲ್ಯಾನ್ ಆಗಿ ನಡೆದಿದೆ. ಇದನ್ನ ನಾನು ಖಂಡಿಸುತ್ತೇನೆ.

ಇಂಥ ಘಟನೆ ನಡೆಯಬಾರದಿತ್ತು. ಈ ಘಟನೆಯಲ್ಲಿ 26-27 ಸಾವನ್ನಪ್ಪಿದ್ದಾರೆ. ಇದು ಭೀಕರವಾದಂತ ದಾಳಿಯಾಗಿದೆ. ಇದನ್ನು ಖಂಡಿಸುತ್ತೇನೆ. ಇಂಡೆಲಿಜೆನ್ಸ್ ಫೇಲ್ ಆಗಿದೆ. ಹಿಂದೆಯೂ ಕೂಡ ದಾಳಿ ಆಗಿದೆ. ಪರಿಹಾರದ ಕುರಿತು ಅಧಿಕಾರಿಗಳ ಜೊತೆಗೆ ಚರ್ಚೆ ಮಾಡುತ್ತೇವೆ. ಉಗ್ರರನ್ನು ಮಟ್ಟ ಹಾಕಲೇಬೇಕು ಎಂದು ಹೇಳಿದರು. ಇನ್ನು ಭರತ್ ಹಾಗೂ ಮಂಜುನಾಥ್ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಾಂತ್ವಾನ ಕೂಡ ತಿಳಿಸಿದ್ದಾರೆ. ಭರತ್ ಪತ್ನಿ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಮಾತನಾಡಿದ್ದಾರೆ. ಈ ದುರಂತದಲ್ಲಿ ಆಪ್ತರನ್ನು ಕಳೆದುಕೊಂಡಿರುವ ಕುಟುಂಬಸ್ಥರಿಗೆ ಸರ್ಕಾರದಿಂದ ಎಲ್ಲಾ ಬೆಂಬಲವನ್ನು ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment