Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ರಾಜಕಾರಣದಲ್ಲೇ ಸಿದ್ದರಾಮಯ್ಯ ಮುಂದುವರಿಕೆ : ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ

---Advertisement---

ಸುದ್ದಿಒನ್,ಬೆಂಗಳೂರು,ಮೇ.30: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದಲ್ಲಿ ಮುಂದುವರೆಯಲಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಬಗ್ಗೆ ಮಾತನಾಡಿದ ಜಾರಕಿಹೊಳಿ, ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸ್ಥಾನದ ಆಫರ್ ನೀಡಿತ್ತು. ಆದರೆ ಅವರು ಅದನ್ನು ನಯವಾಗಿಯೇ ನಿರಾಕರಿಸಿದ್ದಾರೆ. ತಾವು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುವುದಾಗಿ ತಿಳಿಸಿರುವ ಅವರು, 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ತಮ್ಮ ಮುಂದಿನ ಗುರಿ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗುವುದು ನೂರಕ್ಕೆ ನೂರರಷ್ಟು ಖಚಿತ. ಈ ಬಗ್ಗೆ ಯಾವುದೇ ಅನುಮಾನ ಬೇಡ. ಹೈಕಮಾಂಡ್ ಈಗಾಗಲೇ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಅಂತಿಮಗೊಳಿಸಿದ್ದು, ಇದನ್ನು ಸಿದ್ದರಾಮಯ್ಯ ಅವರೂ ಸಹ ಘೋಷಿಸಿದ್ದಾರೆ ಎಂದರು.

ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ನಡೆದ ಉತ್ತಮ ಕೆಲಸಗಳು ಮುಂದೆಯೂ ಮುಂದುವರಿಯಲಿವೆ ಎಂಬ ಭರವಸೆ ನಮಗಿದೆ. ಇದು ಹೊಸ ಸವಾಲಾಗಿದ್ದು, ನಮ್ಮ ಮುಂದಿನ ಸಿಎಂ (ಡಿ.ಕೆ. ಶಿವಕುಮಾರ್) ಇದನ್ನು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯತೀಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ, ಎಂದು ಸ್ಪಷ್ಟಪಡಿಸಿದರು.

Join WhatsApp

Join Now

Join Telegram

Join Now