Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವೇಗೌಡರ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ: ಚೆನ್ನಮ್ಮ ಪಾರ್ಥಿವ ಶರೀರಕ್ಕೆ ಅಂತಿಮ ನಮನ, ಕುಟುಂಬಕ್ಕೆ ಸಾಂತ್ವನ

---Advertisement---

ಬೆಂಗಳೂರು.ಜುಲೈ.19: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಗೌಡರ ನಿವಾಸಕ್ಕೆ ಖುದ್ದಾಗಿ ಭೇಟಿ ನೀಡಿದ ಅವರು, ಮೃತರ ಪಾರ್ಥಿವ ಶರೀರದ ದರ್ಶನ ಪಡೆದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿನೀಡಿ, ದೇವೇಗೌಡರ ಪತ್ನಿ ಚೆನ್ನಮ್ಮನವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿ, ಬಳಿಕ ದುಃಖತಪ್ತ ಕುಟುಂಬ ಸದಸ್ಯರನ್ನು ಸಂತೈಸಿದ್ದು,ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಮತ್ತೊಮ್ಮೆ ಪ್ರಾರ್ಥಿಸಿದ್ದಾರೆ.

 

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು ದೇವೇಗೌಡರ ಕುಟುಂಬದೊಂದಿಗೆ ನಿಕಟವಾದ ಒಡನಾಟ ಇಟ್ಟುಕೊಂಡವನಾಗಿ ಚೆನ್ನಮ್ಮನವರನ್ನು ಸಮೀಪದಿಂದ ಬಲ್ಲವನು. ಚೆನ್ನಮ್ಮನವರು ತಮ್ಮ ಜೀವನದಲ್ಲಿ ಎದುರಾದ ಕಷ್ಟ – ನೋವುಗಳಿಂದ ಕುಗ್ಗದೆ, ಎಲ್ಲವನ್ನೂ ಧೈರ್ಯದಿಂದ ಎದುರಿಸಿದ್ದ ಗಟ್ಟಿಗಿತ್ತಿ. ದೇವೇಗೌಡರ ರಾಜಕೀಯ ಜೀವನದ ಏಳುಬೀಳಿನ ನಡುವೆ ದೊಡ್ಡ ಕುಟುಂಬವನ್ನು ಪೊರೆಯುತ್ತಾ ಬಂದ ಅವರು ಒಬ್ಬ ಆದರ್ಶ ಗೃಹಿಣಿಯಾಗಿದ್ದರು.ಮಾಜಿ ಪ್ರಧಾನಿಗಳ ಮಡದಿಯಾಗಿದ್ದರೂ ಯಾವ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚೆನ್ನಮ್ಮನವರು, ಮಾದರಿ ಸತಿಯಾಗಿ ತುಂಬು ಜೀವನ ಸಾಗಿಸಿದವರು.

ದೀರ್ಘಕಾಲದ ಸಂಗಾತಿಯನ್ನು ಈ ಇಳಿವಯಸ್ಸಿನಲ್ಲಿ ಕಳೆದುಕೊಂಡ ದೇವೇಗೌಡರಿಗೆ ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ. ಗೌಡರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಟ್ವೀಟ್ ಮಾಡಿದ್ದಾರೆ.

Join WhatsApp

Join Now

Join Telegram

Join Now