Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಬಾರಿಯ ಎಲೆಕ್ಷನ್ ನಲ್ಲಿ ಸಿದ್ದರಾಮಯ್ಯ ವರ್ಸಸ್ ವಿಜಯೇಂದ್ರ ಸ್ಪರ್ಧೆ ಶುರುವಾಗುತ್ತಾ..?

Facebook
Twitter
Telegram
WhatsApp

ಮೈಸೂರು: ಈ ಬಾರಿಯ ವಿಧಾನಸಭಾ ಚುನಾವಣೆಗೆ ಸಿದ್ದರಾಮಯ್ಯ ಅವರು ಇನ್ನು ಕ್ಷೇತ್ರವನ್ನೇ ಫೈನಲ್ ಮಾಡಿಲ್ಲ. ಒಂದು ಬಲ್ಲ ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರು ವರುಣಾ ಅಥವಾ ಕೋಲಾರದಿಂದ ಸ್ಪರ್ಧೆ ಮಾಡಬಹುದು ಎನ್ನಲಾಗುತ್ತಿದೆ. ವರುಣಾದಲ್ಲಿ ಸ್ಪರ್ಧೆ ಮಾಡಿದರೆ ಅವರ ಎದುರಾಳಿಯಾಗಿ ವಿಜಯೇಂದ್ರ ನಿಲ್ಲಬಹುದು ನಿರೀಕ್ಷೆಗಳು ಈಗ ಚಿಗುರೊಡೆದಿವೆ.

ಇಂದು ಮೈಸೂರಿನಲ್ಲಿ ಮಾತನಾಡಿದ ಬಿ ವೈ ವಿಜಯೇಂದ್ರ ಅವರಿಗೆ ಅವರಿಗೆ ಸಿದ್ದರಾಮಯ್ಯ ನಿಲ್ಲುವ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆ ಎದುರಾಗಿದೆ. ಅದಕ್ಕೆ ಉತ್ತರಿಸಿದ ವಿಜಯೇಂದ್ರ ಅವರು, ಪಕ್ಷ ನನಗೆ ಯಾವುದೇ ಸವಾಲು ಕೊಟ್ಟರು ನಾನು ಅದನ್ನು ನಿಭಾಯಿಸುತ್ತೇನೆ. ಪಕ್ಷದ ತೀರ್ಮಾನವೇ ನನಗೆ ಅಂತಿಮ. ಎಲ್ಲಾ ಸವಾಲುಗಳನ್ನು ನಾನು ಎದುರಿಸುತ್ತೇನೆ. ನಾನು ವರುಣಾ ಮಾತ್ರವಲ್ಲ, ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಎಂದಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಪಡೆಯುವುದಕ್ಕೆ ಹೋರಾಟ ಮಾಡುತ್ತಿದ್ದೇನೆ. ಕಾಂಗ್ರೆಸ್ ಭ್ರಮೆಯಲ್ಲಿರುವ ಕಾರಣ ಗುಜರಾತ್ ಎಲೆಕ್ಷನ್ ನಲ್ಲಿ ಸೋಲು ಕಂಡಿದ್ದಾರೆ. ಮೋದಿ ಅಲೆಯಲ್ಲ ಅದೊಂದು ಸುನಾಮಿ. ಈ ಬಗ್ಗೆ ಕಾಂಗ್ರೆಸ್ ನವರಿಗೆ ಇನ್ನು ಅರ್ಥವಾಗುತ್ತಿಲ್ಲ ಎಂದು ಟಾಂಗ್ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ,

ಬಿ.ಎನ್.ಚಂದ್ರಪ್ಪನವರ ಗೆಲುವು ಖಚಿತ : ನಗುತಾ ರಂಗನಾಥ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಎಲ್ಲೆಡೆ ಮತದಾರರ ಉತ್ತಮ ಒಲವು

error: Content is protected !!