ರಾಗಿ ಖರೀದಿ ಮೇಲಿನ ನಿರ್ಬಂಧ ತೆರವುಗೊಳಿಸುವಂತೆ ಮೋದಿಗೆ ಪತ್ರ ಬರೆದ ಸಿದ್ದರಾಮಯ್ಯ..!

ಬೆಂಗಳೂರು: ಸದ್ಯ ರೈತರ ಫಸಲು ಕೈಗೆ ಬಂದಿದೆ, ಅದರಲ್ಲೂ ಎಲ್ಲಾ ರೈತರು ಬೆಳೆದ ರಾಗಿಯನ್ನ ಮಾರುವ ಸಮಯ. ಅದಕ್ಕೆಂದೆ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದಾರೆ. ವರ್ಷ ಪೂರ್ತಿ ಕಷ್ಟಪಟ್ಟು ಬೆಳೆದ ರಾಗಿ ಮಾರಲು ಮಂಡಿಗೆ ಹೋದ್ರೆ ನೂರೆಂಟು ನಿಯಮಗಳು. ಇದಕ್ಕೆ ಸಂಬಂಧಿಸಿದಂತೆ ಇದೀಗ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ರಾಗಿ ಖರೀದಿ ಮೇಲಿನ ನಿರ್ಬಂಧವನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದು, ರಾಗಿ ಖರೀದಿಯನ್ನು ಎಂಎಸ್ಪಿ ದರದಲ್ಲಿ ಖರೀದಿಸುವಂತೆ, ನೋಂದಣಿ ಸಮಯ ವಿಸ್ತರಿಸಲು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೇಳಿಕೊಂಡಿದ್ದಾರೆ. ಇಡೀ ವರ್ಷ ಪದೇ ಪದೇ ಸುರಿದ ಮಳೆಯ ನಡುವೆಯೂ ರಾಗಿ, ಭತ್ತ ಮುಂತಾದ ಬೆಳೆಗಳನ್ನು ಕೊಯಿಲು ಮಾಡಿ ಮಾರುಕಟ್ಟೆಗೆ ತರುತ್ತಿದ್ದಾರೆ. ಸರ್ಕಾರವು ಈ ವರ್ಷ ಜನವರಿ 1 ರಿಂದ ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಜಿಲ್ಲೆಗಳ ಪ್ರಮುಖ ಬೆಳೆಯಾದ ರಾಗಿಯನ್ನು ಬೆಳೆಯುತ್ತಾರೆ ಎಂದು ಸಿದ್ದರಾಮಯ್ಯ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!