ಸುದ್ದಿಒನ್, ಚಿತ್ರದುರ್ಗ, (ನ.28): ಎಲ್ಲೆಡೆ ವಿಧಾನ ಪರಿಷತ್ ಚುನಾವಣೆ ಅಬ್ಬರದ ಪ್ರಚಾರ ಜೋರಾಗಿದೆ. ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಜಿಲ್ಲೆಗೆ ಭೇಟಿ ನೀಡಿ ತಮ್ಮ ಅಭ್ಯರ್ಥಿ ಬಿ. ಸೋಮಶೇಖರ್ ಪರ ಪ್ರಚಾರ ಮಾಡಿದ್ದಾರೆ.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಆತನ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ, ಆತನೊಬ್ಬ ಭಯೋತ್ಪಾದಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಜನ ಬಿಜೆಪಿಯನ್ನ ಕಿತ್ತೊಗೆಯಲು ತೀರ್ಮಾನಿಸಿದ್ದಾರೆ. ಯಡಿಯೂರಪ್ಪ 140 ಸೀಟು ಗೆಲ್ಲುತ್ತೇವೆ ಎಂದಿದ್ದಾರೆ. 140 ಸ್ಥಾನ ಗೆಲ್ಲಲು ಮತಗಳೇನು ಅವರ ಜೇಬಿನಲ್ಲಿದ್ದಾವಾ..? ಎಂದು ತಿರುಗೇಟು ನೀಡಿದ್ದಾರೆ.
ಇನ್ನು ನಳೀನ್ ಕುಮಾರ್ ಹೇಳಿಕೆಗೆ ಕಾಂಗ್ರೆಸ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಅವನು ಅಸಂಬದ್ಧ ವಿಚಾರ ಹೇಳ್ತಾನೆ. ಬಿಜೆಪಿಯಲ್ಲಿ ಕೆಲವರು ಅನಗತ್ಯ ಗೊಂದಲ ಸೃಷ್ಟಿಸುವವರಿದ್ದಾರೆ. ಬಿಜೆಪಿಯಲ್ಲಿ ಗೊಂದಲವಿದೆ, ನಮ್ಮ ಪಕ್ಷದಲ್ಲಿ ಗೊಂದಲವಿಲ್ಲ ಎಂದು ಸತೀಶ್ ಜಾರಕಿಹೊಳಿ ಗರಂ ಆಗಿದ್ದರು.
ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ.ಕಾಯಾ೯ಧ್ಯಾಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಹೆಚ್.ಆಂಜನೇಯ,ಹೆಚ್ ಎಮ್ ರೇವಣ್ಣ , ಜಮೀರ್ ಅಹಮ್ಮದ್ ಖಾನ್, ಆರ್.ಬಿ. ತಿಮ್ಮಾಪುರ, ಚಳ್ಳಕೆರೆ ಶಾಸಕ ಟಿ.ರಘು ಮೂತಿ೯, ಮಾಜಿ ಸಂಸದ ಚಂದ್ರಪ್ಪ, ಮಾಜಿ ಶಾಸಕ ಗೋವಿಂದಪ್ಪ, ಸುಧಾಕರ್, ಮಳುವಳ್ಳಿ ಶಿವಣ್ಣ, ಹನುಮಲಿ ಷಣ್ಮುಖಪ್ಪ, ಜಿಲ್ಲಾಧ್ಯಕ್ಷ ಎಂ.ಕೆ.ತಾಜ್ ಪೀರ್, ಡಿ.ಟಿ. ವೆಂಕಟೇಶ್, ಜಿಲ್ಲಾ ಯುವ ಕಾಂಗ್ರೆಸ್ ಅದ್ಯಕ್ಷ ಕಾರೇಹಳ್ಳಿ ಉಲ್ಲಾಸ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಕಾಶ್, ಮಧುಗೌಡ ಸೇರಿದಂತೆ ಮುಂತಾದ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಕಟೀಲು ಮಾನಸಿಕ ಸಮತೋಲನವನ್ನ ಕಳೆದುಕೊಂಡಿದ್ದಾರೆ. ಕಟೀಲು ಆಡಿದ ಮಾತುಗಳು ಅವರ ವ್ಯಕ್ತಿತ್ವ ತೋರಿಸುತ್ತಿದೆ. ಇಂದಿರಾ ಗಾಂಧಿ ದೇಶದ ಐಕ್ಯತೆಗಾಗಿ ಪ್ರಾಣ ಕೊಟ್ಟಿದ್ದಾರೆ. ಈ ಎಲ್ಲ ವಿಚಾರ ನಳಿನ್ ಕುಮಾರ್ ಕಟೀಲುರಿಗೆ ಗೊತ್ತಿಲ್ಲ ಎಂದು ಸಲೀಂ ಅಹ್ಮದ್ ಹಾವೇರಿಯಲ್ಲಿ ತಿರುಗೇಟು ನೀಡಿದ್ದಾರೆ.