ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಗಲಭೆಯಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರ ಸತ್ತು ಹೋಗಿದೆ. ಮಂಗಳೂರಿನ ಗಲಭೆಗೆ ರಾಜ್ಯ ಸರ್ಕಾರವೇ ನೇರ ಹೊಣೆ. ಆಡಳಿತ ವ್ಯವಸ್ಥೆ ಹದಗೆಟ್ಟಿದೆ ಎಂದು ನೇರವಾಗಿ ಬೊಮ್ಮಾಯಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ , ಸಿಎಂ ಬಸವರಾಜ್ ಬೊಮ್ಮಾಯಿಗೆ ಆಡಳಿತ ನಡೆಸುವ ತಾಕತ್ತು ಇಲ್ಲ. ಕಾಂಗ್ರೆಸ್ ಸರ್ಕಾರವಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು ತೇಜಸ್ವಿ ಸೂರ್ಯ ಹೇಳಿದ್ದಾನೆ. ಅಲ್ಲ ಒಬ್ಬ ಸಂಸದ ಆಡುವ ಮಾತೇನ್ರಿ ಅದು. ಈಗ ಅವರದ್ದೇ ಸರ್ಕಾರವಿದೆ. ಹಾಗಾದ್ರೆ ಕೊಳೆತ ಮೊಟ್ಟೆಯಲ್ಲಿ ಹೊಡೆಯಬೇಕಾ ಎಂದಿದ್ದಾರೆ.
ಇನ್ನು ಇದೆ ವೇಳೆ ಉತ್ತರ ಪ್ರದೇಶದ ಸರ್ಕಾರದಂತೆ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರದ ಅಗತ್ಯವಿದೆಯಾ..? ಯುಪಿ ಮಾದರಿಯಲ್ಲಿ ರಾಜ್ಯ ಬದಲಾಗಿದೆಯಾ..? ಬಿಹಾರ ಮಾದರಿಯಲ್ಲಿ ಆಗಿದೆಯಾ..? ಯುಪಿ ಮಾದರಿಯಲ್ಲಿ ಆಗಿದೆ ಎಂದು ಒಪ್ಪಿಕೊಂಡಂತೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.