Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇವೇಗೌಡ ಅವರ ಮೇಲೆ ಆಣೆ ಮಾಡಿ ಸತ್ಯ ಹೇಳಲು ಕೇಳಿದ ಸಿದ್ದರಾಮಯ್ಯ..!

Facebook
Twitter
Telegram
WhatsApp

 

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರ ಮಾಡಿಕೊಳ್ಳಲಿದೆ, ಒಳಗೊಳಗೆ ಚರ್ಚೆಗಳು ನಡೆಯುತ್ತಿವೆ. ಆ ಬಗ್ಗೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ತಂದೆ ಮೇಲೆ ಆಣೆ ಮಾಡಿ ಸತ್ಯ ಹೇಳಲು ಸವಾಲು ಹಾಕಿದ್ದಾರೆ.

ದೇಶದಲ್ಲಿ ಇಂದು ನಡೆಯುತ್ತಿರುವ ಜಾತ್ಯತೀತತೆ ಮತ್ತು ಕೋಮುವಾದದ ನಡುವಿನ ನಿರ್ಣಾಯಕ ಹೋರಾಟದಲ್ಲಿ ನಾವೆಲ್ಲಿ ನಿಂತಿದ್ದೇವೆ ಎನ್ನುವುದನ್ನು ಜನತೆಗೆ ತಿಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ನಿತ್ಯ ನನ್ನ ವಿರುದ್ದ ನಂಜು ಕಾರುತ್ತಿರುವ @hd_kumaraswamy ಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ.

ಮಾನ್ಯ @hd_kumaraswamy ಯವರೇ, ನಿಮ್ಮದು ಜಾತ್ಯತೀತತೆಗೆ ಬದ್ಧವಾಗಿರುವ ಪಕ್ಷ ಎಂದು ಹೇಳುತ್ತಲೇ ಬಂದಿದ್ದೀರಿ. ಹಾಗಿದ್ದರೆ, ಮುಂದಿನ ದಿನಗಳಲ್ಲಿ ನಿಮ್ಮ ಪಕ್ಷ ಬಿಜೆಪಿಯ ಜೊತೆ ಚುನಾವಣಾ ಪೂರ್ವ ಇಲ್ಲವೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ಸಿದ್ಧ ಇದ್ದೀರಾ?.

ವಚನಭಂಗದ ನಿಮ್ಮ ಇತಿಹಾಸವನ್ನು ಕಂಡ ನಾಡಿನ ಜನತೆ ಸುಲಭದಲ್ಲಿ ನಿಮ್ಮನ್ನು ನಂಬಲಾರರು. ನಂಬಿಕೆ ಹುಟ್ಟಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಮ್ಮ ತಂದೆ @H_D_Devegowda ಅವರ ಮೇಲೆ ಆಣೆ ಮಾಡಿ ಘೋಷಿಸಲು ಸಿದ್ಧ ಇದ್ದೀರಾ @hd_kumaraswamy ಅವರೇ?.

ಬಿಜೆಪಿ ಜೊತೆ ಎಂದೆಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನೀವು ಘೋಷಿಸಿಬಿಟ್ಟರೆ ನಿಮ್ಮ ಪಕ್ಷ ಬಿಜೆಪಿಯ ‘ಬಿ-ಟೀಮ್’ ಎಂಬ ಆರೋಪವನ್ನು ಕೂಡಾ ಸುಳ್ಳು ಎಂದು ಸಾಬೀತು ಮಾಡಿದಂತಾಗುತ್ತದೆ. ನಿಮ್ಮ ಪಕ್ಷದ ಹೆಸರು ಕೂಡಾ ಅರ್ಥಪೂರ್ಣವಾಗುತ್ತದೆ.

ಗೋಮುಖ ವ್ಯಾಘ್ರರೇ ಸುತ್ತ ಕುಣಿದಾಡುತ್ತಿರುವ ಈ ಸಂದರ್ಭದಲ್ಲಿ ಜನ ಪ್ರತಿಯೊಬ್ಬರನ್ನೂ ಸಂಶಯದಿಂದ ನೋಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಅಸಲಿ ಮುಖವನ್ನು ಜನರ ಮುಂದೆ ತೆರೆದಿಟ್ಟು ಅವರ ವಿಶ್ವಾಸವನ್ನು ಗಳಿಸಿ, ನಮ್ಮ ಹೋರಾಟದಲ್ಲಿ ಅವರನ್ನು ತೊಡಗಿಸಿಕೊಳ್ಳಬೇಕಾಗಿದೆ.

ಉಳಿದುದೆಲ್ಲವನ್ನೂ ಪಕ್ಕಕ್ಕಿಟ್ಟು ನನ್ನ ವಿರುದ್ಧದ ವೈಯಕ್ತಿಕ ನಿಂದೆ, ವಿಕೃತ ಮನಸ್ಸಿನ ಹಳಹಳಿಕೆ ಮತ್ತು ಸುಳ್ಳುಗಳಿಂದ ಕೂಡಿದ ಅಭಿಯಾನವನ್ನೇ ನೀವು ಮುಂದುವರಿಸುವುದಾದರೆ ಹಾಗೆಯೇ ಮಾಡಿ @hd_kumaraswamy ಅವರೆ. ಸಾರ್ವಜನಿಕ ಜೀವನದಲ್ಲಿರುವ ನಮ್ಮನ್ನು – ನಿಮ್ಮನ್ನು ಜನ ನೋಡಿದ್ದಾರೆ. ಅವರು ತೀರ್ಮಾನಿಸುತ್ತಾರೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿ ಮತ್ತೊಮ್ಮೆ ಅಧಿಕಾರಕ್ಕೆ…!

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿ ದೊಡ್ಡ ಅಬ್ಬರವನ್ನೇ ಸೃಷ್ಟಿಸಿದೆ. ದ್ವಿಶತಕದ ಸೀಟುಗಳನ್ನು ದಾಟಿ ದಾಖಲೆ ಸೃಷ್ಟಿಸಿದ್ದಾರೆ. ಮಹಾಯುತಿ ಈಗಾಗಲೇ 220 ಸ್ಥಾನಗಳಲ್ಲಿ ಮುನ್ನಡೆಯಲ್ಲಿ ಮುಂದುವರಿದಿದೆ. ಏತನ್ಮಧ್ಯೆ, ಮಹಾವಿಕಾಸ್ ಅಘಾಡಿ 53 ಸ್ಥಾನಗಳಲ್ಲಿ ಮುನ್ನಡೆ

error: Content is protected !!