ಬೆಂಗಳೂರು: ಇತ್ತೀಚೆಗೆ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಸೆಪ್ಟೆಂಬರ್ ಕ್ರಾಂತಿಯ ಬಗ್ಗೆ ಶಾಕಿಂಗ್ ಹೇಳಿಕೆಯನ್ನ ನೀಡಿದ್ದರು. ಸೆಪ್ಟೆಂಬರ್ ಕ್ರಾಂತಿ ಹೇಳಿಕೆಯಂತೂ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸಿದ್ದರಾಮಯ್ಯ ಅವರ ಸಂಪುಟ ಪುನರಾರಚನೆಯ ಬಗ್ಗೆ ಹೊಸ ಮಾಹಿತಿಯೊಂದು ಹೊರ ಬಿದ್ದಿದೆ.
ಕೆಲವೊಂದು ಬೆಳವಣಿಗೆಯ ನಡುವೆ ಕಾಂಗ್ರೆಸ್ ಹೈಕಮಾಂಡ್ ಸಂಪುಟ ಪುನರ್ ರಚನೆಗೆ ಕೈ ಹಾಕಿದೆ. ಸೆಪ್ಟೆಂಬರ್ ಕೊನೆ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿಯೇ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ನಿರ್ಧಾರ ಮಾಡಿದೆ ಎನ್ನಲಾಗಿದೆ. ಅಂದ್ರೆ ಸಹಕಾರಿ ಸಚಿವ ರಾಜಣ್ಣ ಹೇಳಿದ ಕ್ರಾಂತಿ ಇದೆ ಆಗಿರಬಹುದಾ ಅಂತ. ಸಚಿವ ಸಂಪುಟ ಪುನರ್ ರಚನೆಯಾದ್ರೆ ಈಗ ಇರುವವರಲ್ಲಿ ಯಾರೂ ಹೊರಗೆ ಹೋಗ್ತಾರೆ..? ಯಾರೂ ಒಳಗೆ ಬರ್ತಾರೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರನ್ನು ಕಾಡುತ್ತಿದೆ.
ಮೂಲಗಳ ಪ್ರಕಾರ ಯಾರನ್ನ ಸಂಪುಟದಿಂದ ಕೈಬಿಡಬಹುದು ಎಂದರೆ, ಕೆ.ಹೆಚ್.ಮುನಿಯಪ್ಪ, ರಹೀಂಖಾನ್, ಶರಣಬಸಪ್ಪ ದರ್ಶನಾಪುರ, ಡಿ.ಸುಧಾಕರ್, ಮಂಕಾಳ ವೈದ್ಯ, ಕೆ.ಎನ್.ರಾಜಣ್ಣ, ಕೆ.ವೆಂಕಟೇಶ್, ಶಿವಾನಂದ ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಭೈರತಿ ಸುರೇಶ್, ಆರ್.ಬಿ.ತಿಮ್ಮಾಪುರ ಅವರನ್ನು ಕೈ ಬಿಡುವ ಸಾಧ್ಯತೆ ಇದೆ ಎಂದು ಕೆಲವರು ಹೇಳುತ್ತಿದ್ದಾರೆ.
ಹಾಗಾದ್ರೆ ಹೊಸದಾಗಿ ಸಂಪುಟಕ್ಕೆ ಸೇರ್ಪಡೆಯಾಗಿವವರು ಯಾರು? ಬಿಕೆ ಹರಿಪ್ರಸಾದ್, ಆರ್ ವಿ ದೇಶಪಾಂಡೆ, ಅಪ್ಪಾಜಿ ನಾಡಗೌಡ, ಶಿವಲಿಂಗೇ ಗೌಡ, ಲಕ್ಷ್ಮಣ ಸವದಿ, ಪ್ರಸಾದ್ ಅಬ್ಬಯ್ಯ, ರೂಪಾ ಶಶಿಧರ್, ಮಳವಳ್ಳಿ ನರೇಂದ್ರ ಸ್ವಾಮಿ, ಅಜಯ್ ಸಿಂಗ್, ಯುಟಿ ಖಾದರ್, ಬಿ ನಾಗೇಂದ್ರ, ಬಂಗಾರ ಪೇಟೆ ನಾರಾಯಣಸ್ವಾಮಿ, ಮಾಗಡಿ ಬಾಲಕೃಷ್ಣ, ಬೇಳೂರು ಗೋಪಾಲಕೃಷ್ಣ, ತಿಟೂರು ಷಡಕ್ಷರಿ, ಟಿ.ಬಿ.ಜಯಚಂದ್ರ, ಬಿ.ಆರ್.ಪಾಟೀಲ್ ಸಂಪುಟ ಸೇರಬಹುದು ಎನ್ನಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















