ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಹಲವು ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಬೆಂಬಲಿಗರು ಕೂಡ ನಮ್ಮಲ್ಲಿಯೇ ಸ್ಪರ್ಧೆ ನಡೆಸಿ ಅಂತ ಒತ್ತಾಯ ಹಾಕುತ್ತಿದ್ದರು. ಇದೀಗ ಕೊನೆಗೂ ಸಿದ್ದರಾಮಯ್ಯ ಅವರು ತಮ್ಮ ಸ್ಪರ್ಧೆಯ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಇಂದು ಕೋಲಾರದಲ್ಲಿ ಸಿದ್ದರಾಮಯ್ಯ ಅವರು ಅದ್ದೂರಿ ಸಮಾರಂಭ ನಡೆಸಿದರು. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ತಾವೂ ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾತೆ. ಅದುವೆ ಕೋಲಾರವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಕಳೆದ ಬಾರಿ ಕೋಲಾರಕ್ಕೆ ಭೇಟಿ ನೀಡಿದಾಗಲೇ, ಸಿದ್ದರಾಮಯ್ಯ ಅವರು ಕೋಲಾರದಲ್ಲಿಯೇ ಸ್ಪರ್ಧಿಸಬಹುದು ಎಂಬ ಚರ್ಚೆಗಳು ಶುರುವಾಗಿತ್ತು. ಇದೀಗ ಅದು ಸತ್ಯವಾಗಿದೆ.

ಈ ಬಗ್ಗೆ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದೇನೆ. ಆದರೆ ಈ ಬಗ್ಗೆ ನಾನೇ ಘೋಷಿಸಿಕೊಳ್ಳಲು ಸಾಧ್ಯವಿಲ್ಲ. ಪಕ್ಷದ ನಿಯಮಗಳನ್ನು ಪಾಲಿಸಬೇಕಾಗಿದೆ. ಹೀಗಾಗಿ ಹೈಕಮಾಂಡ್ ಒಪ್ಪಿಗೆ ಬೇಕಾಗಿದೆ ಎಂದಿದ್ದಾರೆ. ಸಿದ್ದರಾಮಯ್ಯ ಅವರ ಸ್ಪರ್ಧೆ ನೋಡಿಕೊಂಡು ಸ್ಟ್ರಾಂಗ್ ಕ್ಯಾಂಡಿಡೇಟ್ ಹಾಕುವುದಕ್ಕೆ ಬಿಜೆಪಿ ಕಾಯುತ್ತಿತ್ತು. ಆದರೆ ಇದೀಗ ಸಿದ್ದರಾಮಯ್ಯ ಅವರು ಉಲ್ಟಾ ಹೊಡೆದಿದ್ದಾರೆ. ಹೈಕಮಾಂಡ್ ಈ ನಿರ್ಧಾರಕ್ಕೆ ಏನು ಹೇಳುತ್ತೆ ಎಂಬುದನ್ನು ಕಾದು ನೋಡಬೇಕಿದೆ.

