ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಆಗಾಗ್ಗೆ ಮುನ್ನೆಲೆಗೆ ಬರುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. “ನನ್ನ ಅಧಿಕಾರದ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ,” ಎಂದು ಹೇಳುವ ಮೂಲಕ ಅವರು ಚೆಂಡನ್ನು ದೆಹಲಿ ನಾಯಕರ ಅಂಗಳಕ್ಕೆ ಎಸೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಆದರೆ, ಮುಖ್ಯಮಂತ್ರಿಯಾಗಿ ನಾನು ಮುಂದುವರಿಯುವ ಬಗ್ಗೆ ಹೈಕಮಾಂಡ್ ಏನು ಹೇಳುತ್ತದೋ ಅದಕ್ಕೆ ನಾನು ಬದ್ಧ. ಅವರು ‘ಇರು’ ಎಂದರೆ ಇರುತ್ತೇನೆ, ‘ಬಿಡು’ ಎಂದರೆ ಬಿಡುತ್ತೇನೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದ್ದಾರೆ.
ಸಂಪುಟ ಪುನರಚನೆಯ ಕುರಿತು ದೆಹಲಿಗೆ ತೆರಳುವ ಬಗ್ಗೆ ಮಾತನಾಡಿದ ಅವರು, ಇದುವರೆಗೆ ನಾನು ಹೈಕಮಾಂಡ್‌ನಿಂದ ಯಾವುದೇ ಅಪಾಯಿಂಟ್‌ಮೆಂಟ್ ಕೇಳಿಲ್ಲ. ಒಂದು ವೇಳೆ ರಾಹುಲ್ ಗಾಂಧಿ ಅವರು ಸಮಯ ನೀಡಿದರೆ ಅಥವಾ ಹೈಕಮಾಂಡ್ ಕರೆದರೆ ಖಂಡಿತವಾಗಿಯೂ ದೆಹಲಿಗೆ ಹೋಗುತ್ತೇನೆ. ಅಲ್ಲಿ ಸಂಪುಟ ಪುನರಚನೆ ಸೇರಿದಂತೆ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸುತ್ತೇನೆ ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










