Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪುತ್ರ ಯತೀಂದ್ರ ಮಾತಿಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

---Advertisement---

ಬೆಂಗಳೂರು: ಇತ್ತೀಚೆಗಷ್ಟೇ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ಅಂದ್ರೆ ಉತ್ತರಾಧಿಕಾರಿ ಯಾರು ಎಂಬ ಬಗ್ಗೆ ಮಾತನಾಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಉತ್ತರಾಧಿಕಾರಿಯಾಗುವ ಗುಣ ಹೊಂದಿದ್ದಾರೆ ಎಂಬುದಾಗಿ ಹೇಳಿದ್ದರು. ಈ ಹೇಳಿಕೆ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಬದಲಿಗೆ ಹೈಕಮಾಂಡ್ ಮಟ್ಟಕ್ಕೂ ಹೋಗಿದೆ. ಈ ಸಂಬಂಧ ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಮರ್ಥನೆ ನೀಡಿದ್ದಾರೆ.

ನಾನು ಅವನ ಬಳಿ ಮಾತನಾಡಿದ್ದೇನೆ. ಕ್ಲಾರಿಟಿಯನ್ನು ಕೊಟ್ಟಿದ್ದಾನೆ. ಏನಂತ ಹೇಳಿದೆ ಎಂದಿ ಕೇಳಿದೆ. ಅವನು ಸೈದ್ಧಾಂತಿಕವಾಗಿ ಮಾತನಾಡಿದ್ದಾನೆ ಅಷ್ಟೇ. ಇಂತವರೇ ಮುಖ್ಯಮಂತ್ರಿ ಅಂತ ಹೇಳಿಲ್ಲ ಅಂದಿದ್ದಾನೆ. ನೀವೂ ಸುಮ್ಮನೆ ಇರಲ್ವಲ್ಲ ಹೀಗೆಲ್ಲಾ ಕೇಳ್ತೀರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಅವರು ಕೂಡ ಈ ಅವಧಿಯಲ್ಲಿಯೇ ಸಿಎಂ ಆಗ್ಬೇಕು ಅಂತ ಕಾಯ್ತಾ ಇರೋರು‌. ಆಸೆ ಇದ್ದರು ಪಕ್ಷಕ್ಕಾಗಿ ಎಲ್ಲಿಯೂ ಮಾತನಾಡುತ್ತಿಲ್ಲ. ಜೊತೆಗೆ ಅವರ ಬೆಂಬಲಿಗರು ಆಗಾಗ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ, ಆಗ್ಬೇಕು ಅಂತ ಮಾತನಾಡಿದವರಿಗೂ ನೋಟೀಸ್ ಕೊಟ್ಟು ಸುಮ್ಮನೆ ಮಾಡಿದ್ದಾರೆ. ಇದೇ ಕಾರಣಕ್ಕೆ ನಾವೂ ಮಾತನಾಡಿದ್ರೆ ಶಿಸ್ತು ಕ್ರಮ ಜರುಗಿಸುತ್ತಾರೆ ಸಿಎಂ ಮಗ ಮಾತನಾಡಿದ್ರೆ ನೋಟೀಸ್ ಇಲ್ವಾ ಎಂಬ ಪ್ರಶ್ನೆಗಳು ಬಂದಿವೆ. ಇದೆಲ್ಲೆದರ ಹೊರತಾಗಿ ಡಿಕೆ ಶಿವಕುಮಾರ್ ಮೇಲೂ ಯತೀಂದ್ರ ಅವರ ಹೇಳಿಕೆ ಪರಿಣಾಮ ಬೀರಿದಂತೆ ಕಾಣಿಸುತ್ತಿದೆ. ಆ ಬಗ್ಗೆ ಕೇಳಿದಾಗ ಮಾತನಾಡುವುದಿಲ್ಲ‌ ಎಂಬ ಮಾತನ್ನ ಹೇಳಿದ್ದಾರೆ. ಸದ್ಯ ರಾಜ್ಯ ರಾಜಕೀಯದಲ್ಲಿ ಜೋರು ಚರ್ಚೆಗೆ ಕಾರಣವಾದ ಯತೀಂದ್ರ ಅವರ ಹೇಳಿಕೆಯನ್ನ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದಾರೆ. ಈ ಹೇಳಿಕೆ ಇನ್ನು ಹೇಗೆಲ್ಲಾ ತಿರುವು ಪಡೆಯುತ್ತೆ ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now