Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರ ಬಜೆಟ್ ಗೂ ಮುನ್ನ ಸಿದ್ದರಾಮಯ್ಯ ಪತ್ರ : ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆಗೆ ಮನವಿ

---Advertisement---

ಬೆಂಗಳೂರು: ಕೇಂದ್ರ ಬಜೆಟ್ 2025 ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ನಿರೀಕ್ಷೆಗಳು ಬೆಟ್ಟದಷ್ಟಿವೆ. ಎಲ್ಲಾ ರಾಜ್ಯಗಳ ನಿರೀಕ್ಷೆಯಂತೆ ಕರ್ನಾಟಕಕ್ಕೂ ನಿರೀಕ್ಷೆಗಳಿದಾವೆ. ಅದರಲ್ಲೂ ಭದ್ರಾ ಮೇಲ್ದಂಡೆ ಯೋಜನೆಗೆ ಬರಬೇಕಾದ ಅನುದಾನದ ಬಗ್ಗೆ ನಿರೀಕ್ಷೆಗಳಿದಾವೆ. ಸಿಎಂ ಸಿದ್ದರಾಮಯ್ಯ ಅವರು ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಘೋಷಣೆಯಾಗಿ 3 ವರ್ಷಗಳಾದರೂ ಬಿಡುಗಡೆಯಾಗಿಲ್ಲ. ಈ ಸಂಬಂಧ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಬರೆದ ಪತ್ರದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದಿನ ಬಜೆಟ್ ನಲ್ಲಿ 5,300 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 2023-24ನೇ ಕೇಂದ್ರ ಬಜೆಟ್ ನಲ್ಲಿ 5,300 ಕೋಟಿ ಅನುದಾನದ ಜೊತೆಗೆ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವುದಾಗಿ ತಿಳಿಸಲಾಗಿತ್ತು. ಆದರೆ 3 ವರ್ಷವಾದರೂ ಅನುದಾನ ಬಿಡುಗಡೆಯಾಗಿಲ್ಲ. ಈ ವರ್ಷವಾದರೂ ಬಿಡುಗಡೆ ಮಾಡಿ ಎಂದು ಹಣಕಾಸು ಮತ್ತು ಜಲಶಕ್ತಿ ಸಚಿವಾಲಯಗಳಿಗೆ ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳ ಸುಮಾರು 2.25 ಲಕ್ಷ ಹೆಕ್ಟೇರ್ ಭೂ ಪ್ರದೇಶಕ್ಕೆ ಹನಿ ನೀರಾವರಿ ಒದಗಿಸಲಿದೆ. ಅಲ್ಲದೆ, 367 ಕೆರೆಗಳಿಗೆ ನೀರು ತುಂಬಿಸಲಿದೆ. 2008ರಲ್ಲಿ ಈ ಯೋಜನೆಯ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಈವರೆಗೆ 10,121.75 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಡಿಸೆಂಬರ್ 24, 2020ರಂದು ಭದ್ರಾ ಮೇಲ್ದಂಡೆ ಯೋಜನೆಯ ತಾಂತ್ರಿಕ ಆರ್ಥಿಕ ಕಾರ್ಯಸಾಧುವನ್ನು ಜಲಶಕ್ತಿ ಸಚಿವಾಲಯದ ಸಲಹಾ ಸಮಿತಿ ಅನುಮೋದಿಸಿದೆ. 2021 ಮಾರ್ಚ್‌ನಲ್ಲಿ 15ನೇ ಬಂಡವಾಳ ಮಂಜೂರಾತಿ ಸಮಿತಿ 16,125 ಕೋಟಿ ರೂಪಾಯಿ ಮೊತ್ತದ ಹೂಡಿಕೆಗೆ ಅನುಮೋದನೆ ನೀಡಿದೆ. ಅಲ್ಲದೆ, ಉನ್ನತ ಮಟ್ಟದ ಸಂಚಲನಾ ಸಮಿತಿ ಈಗಾಗಲೇ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಶಿಫಾರಸು ಮಾಡಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment