Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದ ವೇದಿಕೆ ಕುಸಿತ : ಸ್ವಲ್ಪದರಲ್ಲಿಯೇ ಬಚಾವ್..!

---Advertisement---

ಗದಗ: ಚುನಾವಣೆಗಡ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಇದೆ. ಹೀಗಾಗಿ ಕಾಂಗ್ರೆಸ್ ನ ಹಿರಿಯ ನಾಯಕರು ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ, ಜನರನ್ನು ಸೆಳೆಯುವ, ತಾವೂ ನೀಡುವ ಭರವಸೆಗಳನ್ನು ಮನದಟ್ಟು ಮಾಡುತ್ತಿದ್ದಾರೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗದಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದರೆ ಆ ಕಾರ್ಯಕ್ರಮ ಮುಗಿದ ಕೂಡಲೇ ವೇದಿಕೆ ಬಿದ್ದು ಹೋಗಿದೆ.

ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ವಟ್ಟಿಯಲ್ಲಿ ನಡೆದ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಗಾಳಿ ಸಮೇತ ಮಳೆಯಾಗುತ್ತಿದೆ. ಈ ಹಿನ್ನೆಲೆ ಬೆಳ್ವಟ್ಟಿಯಲ್ಲಿ ಹಾಕಿದ್ದ ಬೃಹತ್ ವೇದಿಕೆ ಬಿರುಗಾಳಿಗೆ ಸಿಲುಕಿ ನೆಲಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ ಅಂದ್ರೆ ಸಿದ್ದರಾಮಯ್ಯ ಅವರು ತೆರಳಿದ ಮೇಲೆ ಈ ದುರ್ಘಟನೆ ನಡೆದಿದೆ. ಜೊತೆಗೆ ಶಿರಹಟ್ಟಿ ಕಾಂಗ್ರೆಸ್ ಅಭ್ಯರ್ಥಿ ಸುಜಾತ ದೊಡ್ಮ‌ನಿ ಅವರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಕಾರ್ಯಕ್ರಮಕ್ಕೆ ಇಂದು ಸುತ್ತ ಮುತ್ತಲ ಹಳ್ಳಿಯಿಂದೆಲ್ಲಾ ಜನ ಬಂದಿದ್ದರು. ಹತ್ತು ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು. ಕಾರ್ಯಕ್ರಮ ಮುಗಿದ ಮೇಲೆ ಜನರೆಲ್ಲಾ ವಾಪಾಸ್ ಆಗಿದ್ದಾರೆ. ಬಳಿಕ ಅಲ್ಲಿ ಅಭ್ಯರ್ಥಿ ಸುಜಾತ ಮತ್ತು ಬೆಂಬಲಿಗರು ಮಾತ್ರ ಉಳಿದಿದ್ದರು. ಕಾರ್ಯಕರ್ತರ ಹುಟ್ಟುಹಬ್ಬವನ್ನು ಆಚರಣೆ ಮಾಡುವ ಪ್ಲ್ಯಾನ್ ಮಾಡುವಾಗ ಇಂಥದ್ದೊಂದು ಘಟನೆ ನಡೆದಿದೆ. ಸದ್ಯ ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...