Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ಹಾದಿಯೇ ನಮಗೆ ಮಾದರಿ: ಸಿಎಂ ರಾಜೀನಾಮೆ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಭಾವುಕ ಪೋಸ್ಟ್!

---Advertisement---

ಸುದ್ದಿಒನ್, ಬೆಂಗಳೂರು, ಮೇ.29: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. “ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ” ಎಂದು ಅವರು ಪೋಸ್ಟ್‌ ಹಂಚಿಕೊಂಡಿದ್ದಾರೆ.

​ಡಿ.ಕೆ. ಶಿವಕುಮಾರ್ ಅವರ ಪೋಸ್ಟ್‌ನ ಸಾರಾಂಶ ಹೀಗಿದೆ:

ಸಿದ್ದರಾಮಯ್ಯನವರೇ ಅತ್ಯುತ್ತಮ ಉದಾಹರಣೆ’ : 

​”ದೇವರು ನೀಡುವ ಅವಕಾಶವನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದಕ್ಕೆ ನಮ್ಮ ಸಿದ್ದರಾಮಯ್ಯನವರೇ ಅತ್ಯುತ್ತಮ ಉದಾಹರಣೆ. ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿದ್ದಾರೆ” ಎಂದು ಶ್ಲಾಘಿಸಿದ್ದಾರೆ.

​’ಹೆಗಲಿಗೆ ಹೆಗಲು ಕೊಟ್ಟು ನಿಂತ ನಾಯಕ’

​ಮುಂದುವರಿದು ಮಾತನಾಡಿದ ಡಿಕೆಶಿ, “ಭಾರತೀಯ ರಾಜಕಾರಣದ ಧೀಮಂತ ನಾಯಕರಾದ ಸಿದ್ದರಾಮಯ್ಯ ಅವರ ಜನಪರ ಯೋಜನೆಗಳು ಹಾಗೂ ರಾಜ್ಯದ ಅಭಿವೃದ್ಧಿಗೆ ನೀಡಿದ ಕೊಡುಗೆ ಅವಿಸ್ಮರಣೀಯ. 2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ ದಿನದಿಂದಲೂ ಇಂದಿನವರೆಗೆ, ಅವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಜೊತೆಯಾಗಿ ನಿಂತಿದ್ದಾರೆ. ಅವರ ಆಡಳಿತದಲ್ಲಿ ನಾನು ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಪಡೆದುಕೊಂಡಿದ್ದು ನನ್ನ ಭಾಗ್ಯ” ಎಂದು ನೆನೆದಿದ್ದಾರೆ.

​”ಮುಂದಿನ ದಿನಗಳಲ್ಲೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ನಮ್ಮ ಪಕ್ಷದ ಬಲವರ್ಧನೆಗೆ ಸಿದ್ದರಾಮಯ್ಯ ಅವರ ಮಾರ್ಗದರ್ಶನ ಮತ್ತು ಹಿರಿಯ ಅನುಭವ ನಮಗೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ. ಕರ್ನಾಟಕದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯೋಣ ಎಂದು ಹೇಳಿದ್ದಾರೆ.‌

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now