ಮೈಸೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒತ್ತಾಯಿಸುತ್ತಿದ್ದಾರೆ. ಅದಕ್ಕಾಗಿ ಪಾದಯಾತ್ರೆಯನ್ನು ಮಾಡುತ್ತಿದ್ದಾರೆ. ಪಾದಯಾತ್ರೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಅದರ ಭಾಗವಾಗಿ ಕಾಂಗ್ರೆಸ್ ನವರು ಮೈಸೂರಿನಲ್ಲಿ ಜನಾಂದೋಲನ ಸಮಾವೇಶ ಹಮ್ಮಿಕೊಂಡಿದ್ದಾರೆ. ಈ ಸಮಾರಂಭದಲ್ಲಿ ಸಿದ್ದರಾಮಯ್ಯ ವಿರುದ್ಧ ಕತ್ತಿ ಮಸೆಯುತ್ತಿರುವವರಿಗೆ ಡಿಕೆಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇದೊಂದು ಸಿಎಂ ಸಿದ್ದರಾಮಯ್ಯ ಅವರನ್ನು ಸಿಕ್ಕಿ ಹಾಕಿಸುವ ಹುನ್ನಾರ. ಈ ಕನಕಪುರದ ಬಂಡೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಇದರ. ಬಂಡೆ ಜೊತೆಗೆ ಶಾಸಕರಿದ್ದಾರೆ. ಈ ಬಂಡೆಯನ್ನು ಕಡೆದರೆ ಶಿಲೆ, ವಿರುದ್ಧ ನಿಂತುಕೊಂಡರೆ ನಾಶವೇ ಸರಿ ಎಂದು ವಿರೋಧ ಪಕ್ಷದ ನಾಯಕರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆಯ ಮಾತುಗಳನ್ನು ಆಡಿದ್ದಾರೆ.
ಇದೇ ವೇಳೆ ಬಿಜೆಪಿ ಮತ್ತು ಜೆಡಿಎಸ್ ದೋಸ್ತಿ ಮೊದಲೆಲ್ಲಾ ಹೇಗೆ ಕಿತ್ತಾಡುತ್ತಿದ್ದರು ಎಂಬುದರ ಬಗ್ಗೆ ವಿಡಿಯೋಗಳನ್ನು ಪ್ಲೇ ಮಾಡಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಬಡ ಜನರಿಗಾಗಿ ಶ್ರಮಿಸಿದ್ದೇವೆ. ಪಂಚ ಗ್ಯಾರಂಟಿಗಳನ್ನ ಜಾರಿಗೆ ತಂದಿದ್ದೇವೆ. ಇದನ್ನು ಸಹಿಸಲಾಗದೆ ಸಿಎಂ ಸಿದ್ದರಾಮಯ್ಯ ಅವರನ್ನು ಮೂಡಾ ಹಗರಣದಲ್ಲಿ ಒತ್ತಾಯಿಸಲಾಗುತ್ತಿದೆ. ಮೂಡಾ ಸೈಟ್ ಯಾರ ಆಡಳಿತ ಅವಧಿಯಲ್ಲಿ ನೀಡಿದ್ದು..? ಅದು ಬಿಜೆಪಿ ನಾಯಕರ ಅವಧಿಯಲ್ಲಿಯೇ ಆಗಿದೆ. ಆಗ ಎಲ್ಲಿಗೆ ಹೋಗಿತ್ತು ಈ ಹಗರಣ ವಿಚಾರ ಎಂದಿದ್ದಾರೆ.
ಇದೇ ವೇಳೆ ಜೆಡಿಎಸ್ ವಿರುದ್ಧ ಈ ಹಿಂದೆ ಯಡಿಯೂರಪ್ಪ ಅವರು, ಕುಮಾರಸ್ವಾಮಿ ನಂಬಿದವರನ್ನು ಮುಗಿಸುತ್ತಾರೆ. ಅವರು ಮಾಡಿದ ಹಗರಣವನ್ನು ಬಯಲು ಮಾಡಿದ್ದೇನೆ. ಮುಂದೆ ಮಾಡುತ್ತೇನೆ ಎಂಬ ವಿಡಿಯೋ ಪ್ಲೇ ಮಾಡಿದ್ದಾರೆ.