Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಅಹಿಂದ ವರ್ಗಕ್ಕೆ ತಂದ ನೋವು; ಬಿ.ಟಿ.ಜಗದೀಶ್ ಬೇಸರ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 31 : ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಿರುವುದು ಕೇವಲ ಕುರುಬರಿಗಷ್ಟೆ ಅಲ್ಲ. ಇಡೀ ಅಹಿಂದ ವರ್ಗಕ್ಕೆ ನೋವುಂಟಾಗಿದೆ ಎಂದು ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ಬೇಸರ ವ್ಯಕ್ತಪಡಿಸಿದರು.

 

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುರಿ ಕಾಯುತ್ತಿದ್ದ ಹುಡುಗ ರಾಜ್ಯದ ಮುಖ್ಯಮಂತ್ರಿಯಾಗುವವರೆಗೆ ಬೆಳೆದಿದ್ದಾರೆಂದರೆ ಕಮ್ಮಿ ಸಾಧನೆಯಲ್ಲ. ಅಹಿಂದ ಸಂಘಟಕ ಸಿದ್ದರಾಮಯ್ಯ ಕಾಂಗ್ರೆಸ್‍ಗೆ ಬಂದಾಗ ವರಿಷ್ಟರು ಸ್ವಾಗತಿಸಿ ಎರಡು ಬಾರಿ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದರು. ಎರಡನೆ ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಬಡವರು, ದೀನ ದಲಿತರು, ಶೋಷಿತರು, ಧ್ವನಿಯಿಲ್ಲದವರಿಗೆ ಶಕ್ತಿ ತುಂಬಿದರು. ವರಿಷ್ಟರ ಸೂಚನೆಯಂತೆ ರಾಜಿನಾಮೆ ನೀಡಿರುವುದು ನಮಗೆಲ್ಲಾ ನೋವಾಗಿದ್ದರು. ಮತ್ತೊಂದು ಕಡೆ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ನಾವುಗಳು ಸ್ವಾಗತಿಸುತ್ತೇವೆಂದು ತಿಳಿಸಿದರು.

 

ಮೂರನೆ ಅತಿ ದೊಡ್ಡ ಸಮುದಾಯ ನಮ್ಮದು. ಜೆಡಿಎಸ್.ನಲ್ಲಿ ನಮಗೆ ಅವಕಾಶ ಕಡಿಮೆಯಿದೆ. ವಿಧಾನಸಭೆ, ವಿಧಾನಪರಿಷತ್, ಲೋಕಸಭೆ, ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಸಮಾಜಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು. ಜೊತೆಗೆ ರಾಜ್ಯದಲ್ಲಿ ಎರಡನೆ ಅವಧಿಯ ನಿಗಮ ಮಂಡಳಿಗಳ ನೇಮಕದಲ್ಲಿ ನಮ್ಮ ಜನಾಂಗಕ್ಕೆ ಒತ್ತು ಕೊಡಬೇಕು. ನಾಲ್ಕು ಬಾರಿ ಶಾಸಕರಾಗಿರುವ ಬಿ.ಜಿ.ಗೋವಿಂದಪ್ಪನವರನ್ನು ರಾಜ್ಯ ಸಚಿವ ಸಂಪುಟದಲ್ಲಿ ಮಂತ್ರಿಯನ್ನಾಗಿ ಮಾಡಬೇಕು. ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಇವರುಗಳಿಗೂ ಸಚಿವ ಸ್ಥಾನ ಕೊಡಬೇಕೆಂದು ವರಿಷ್ಟರನ್ನು ಒತ್ತಾಯಿಸಿದರು.
ಡಿ.ಕೆ.ಶಿವಕುಮಾರ್‍ರವರ ಮಂತ್ರಿ ಮಂಡಲದಲ್ಲಿ ಕುರಿಬರಿಗೆ ಐದು ಸಚಿವ ಸ್ಥಾನ ಸಿಗಬೇಕು. ಏಳು ವಿಧಾನಪರಿಷತ್ ಸ್ಥಾನ ಖಾಲಿಯಾಗುತ್ತಿದೆ. ರಾಜ್ಯಸಭೆಗೂ ನಡೆಯುವ ಚುನಾವಣೆಯಲ್ಲಿ ಕುರುಬರಿಗೆ ಹೆಚ್ಚಿನ ಪ್ರಾಧಾನ್ಯತೆ ಕೊಡಬೇಕೆಂದು ಬಿಜೆಪಿ. ಜೆಡಿಎಸ್.ನವರಿಗೂ ಆಗ್ರಹಿಸಿದ ಬಿ.ಟಿ.ಜಗದೀಶ್, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುರುಬ ಸಮುದಾಯದ ಸಮೀಕ್ಷೆಯನ್ನು ಸಿದ್ದರಾಮಯ್ಯನವರು ಸ್ವೀಕಾರ ಮಾಡಿರುವುದನ್ನು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅಂಗೀಕರಿಸಿ ಯಥಾವತ್ತಾಗಿ ಜಾರಿಗೊಳಿಸಬೇಕು. ಇದರಿಂದ ಹಿಂದುಳಿದ 104 ಜಾತಿಗಳಿಗೆ ಅನುಕೂಲವಾಗಲಿದೆ ಎಂದರು.

 

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಂ ಮಾತನಾಡಿ ನೂತನವಾಗಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಓಬಿಸಿ. ಪರಿಶಿಷ್ಟ ಜಾತಿ‌ ಪರಿಶಿಷ್ಟ ವರ್ಗದವರನ್ನು ಸಮಾನವಾಗಿ ತೆಗೆದುಕೊಂಡು ಹೋಗಬೇಕು. ಜಿಲ್ಲೆಯ ನಾಲ್ವರು ಶಾಸಕರುಗಳಿಗೆ ಸಚಿವ ಸ್ಥಾನ ಸಿಗಬೇಕು. ತಳಮಟ್ಟದ ಕುರುಬ ಜನಾಂಗವನ್ನು ನಿಮ್ಮ ಜೊತೆ ವಿಶ್ವಾಸದಲ್ಲಿಟ್ಟುಕೊಂಡು ಹೆಚ್ಚಿನ ಸ್ಥಾನಮಾನ ಕಲ್ಪಿಸುವಂತೆ ಮನವಿ ಮಾಡಿದರು.

ಜಿಲ್ಲಾ ಕುರುಬರ ಸಂಘದ ಗೌರವಾಧ್ಯಕ್ಷ ಹೆಚ್.ಮಂಜಪ್ಪ ಮಾತನಾಡುತ್ತ ಚೆಕ್‍ಡ್ಯಾಂಗಳ ರಾಜ ಎಂದೆ ಪ್ರಸಿದ್ದಿಯಾಗಿರುವ ಹೊಸದುರ್ಗದ ಹಿರಿಯ ಶಾಸಕ ಬಿ.ಜಿ.ಗೋವಿಂದಪ್ಪನವರಿಗೆ ನೂತನ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಕೊಡಬೇಕು. ನಾಲ್ಕು ಬಾರಿ ಶಾಸಕರಾಗಿರುವ ಇವರಿಗೆ ರಾಜಕಾರಣದಲ್ಲಿ ಅಪಾರ ಅನುಭವವಿದೆ. ಹಾಗಾಗಿ ಪರಿಗಣನೆಗೆ ತೆಗೆದುಕೊಂಡು ಕುರುಬ ಸಮಾಜಕ್ಕೆ ಸಾಮಾಜಿಕ ನ್ಯಾಯ ನೀಡಬೇಕೆಂದು ಆಗ್ರಹಿಸಿದರು. ಮುತ್ತು, ಮಾಳೇಶ್, ಉಮೇಶ್, ಕುರುಬರ ಸಂಘದ ನಿರ್ದೇಶಕ ಹೊಸದುರ್ಗದ ಲಿಂಗಮೂರ್ತಿ, ಸುರೇಶ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now