Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಡಿಯೂರಪ್ಪ ಅವರನ್ನು ಬಿಜೆಪಿಯವರೇ ಪಂಚರ್ ಮಾಡಿದ್ದಾರೆ : ಸಿದ್ದರಾಮಯ್ಯ..!

---Advertisement---

ಕೋಲಾರ: ಕಾಂಗ್ರೆಸ್ ನಿಂದ ಚುನಾವಣಾ ಪ್ರಚಾರಕ್ಕಾಗಿ ಪ್ರಜಾಧ್ವನಿ ಎಂಬ ಬಸ್ ಮೂಲಕ ಯಾತ್ರೆ ಶುರು ಮಾಡಿದ್ದಾರೆ. ಈ ಯಾತ್ರೆಯ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಇತ್ತಿಚೆಗೆ ವ್ಯಂಗ್ಯವಾಡಿದ್ದರು. ಕಾಂಗ್ರೆಸ್ ಬಸ್ ಪಂಕ್ಚರ್ ಆಗುತ್ತೆ ಎಂದಿದ್ದರು. ಆ ಮಾತಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಈಗಾಗಲೇ ಬಿಜೆಪಿ ನಾಯಕರು ಯಡಿಯೂರಪ್ಪ ಅವರನ್ನು ಪಂಕ್ಚರ್ ಮಾಡಿದ್ದಾರೆ ಎಂದಿದ್ದಾರೆ.

ಕೋಲಾರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದು, ಬಿಎಸ್ವೈ ಬಗ್ಗೆ ನನಗೆ ಅಪಾರ ಗೌರವವುದೆ. ಅನುಕಂಪವಿದೆ. ಯಡಿಯೂರಪ್ಪ ಅವರನ್ನು ಬಿಜೆಪಿಗರೇ ಪಂಕ್ಚರ್ ಮಾಡಿದ್ದಾರೆ. ಅದಕ್ಕೆ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದಾರೆ. ನಮ್ಮ ಪಕ್ಷದಲ್ಲಿ ಯಾರು ಸಹ ಕನಸು ಕಾಣುತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತೆ ಅಂತ ವಾಸ್ತವ ಸತ್ಯ ಹೇಳಿದ್ದೇನೆ. ಕಾಂಗ್ರೆಸ್ ಈ ಬಾರಿ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುತ್ತೆ. ನಾನು ಕೋಲಾರದಿಂದಾನೇ ಸ್ಪರ್ಧೆ ಮಾಡಿ 200% ಗೆಲ್ತೀನಿ. ನಾನು ಎಲ್ಲಿ ನಿಲ್ಲಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...