Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೆಂಕಟರಮಣಪ್ಪ ಅಗಲಿಕೆಗೆ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ ಭಾವುಕ: ಕಾಲು ಶತಮಾನದ ಬಾಂಧವ್ಯ ನೆನೆದು ನಮನ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 29 : “ಹೊರನೋಟಕ್ಕೆ ನೇರ, ನಿಷ್ಠೂರವಾಗಿ ಮಾತನಾಡುತ್ತಿದ್ದರೂ, ಒಳಗಣ್ಣಿನಲ್ಲಿ ಅವರು ಅಪ್ಪಟ ಮಾತೃಹೃದಯಿಯಾಗಿದ್ದರು. ಅವರ ಕೊನೆಯುಸಿರಿನ ಸುದ್ದಿ ಕೇಳಿ ಒಮ್ಮೆಲೇ ಎದೆ ಜರ್ರೆಂದಿತು, ಮಾನಸಿಕವಾಗಿ ಆಘಾತವಾಯಿತು…”

ಹೀಗೆನ್ನುತ್ತಾ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ಪಾವಗಡದ ಧೀಮಂತ ನಾಯಕ ವೆಂಕಟರಮಣಪ್ಪ ಅವರ ಅಗಲಿಕೆಗೆ ಅತ್ಯಂತ ಭಾವುಕರಾಗಿ ಕಣ್ಣೀರಿನ ಸಂತಾಪ ಸೂಚಿಸಿದ್ದಾರೆ.

ಕಾಲು ಶತಮಾನದ ಬಾಂಧವ್ಯ, ನೆನೆದು ಕರಗಿದ ಶ್ರೀಗಳು
ಈ ಕುರಿತು ಅತ್ಯಂತ ಆರ್ದ್ರತೆಯಿಂದ ಕೂಡಿರುವ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶ್ರೀಗಳು, ಕಳೆದುಹೋದ ದಿನಗಳನ್ನು ಕೃತಜ್ಞತೆಯಿಂದ ಸ್ಮರಿಸಿದ್ದಾರೆ:

“ನಮಗೂ ಅವರಿಗೂ ಕಳೆದ 25 ವರ್ಷಗಳ ಸುದೀರ್ಘ ಒಡನಾಟ. ಸದಾಕಾಲ ನಮ್ಮ ಹಿತವನ್ನೇ ಚಿಂತಿಸುತ್ತಿದ್ದ ಜೀವವದು. ಮಠದ ಪ್ರಗತಿಯ ಬಗ್ಗೆ ಅವರು ನೀಡುತ್ತಿದ್ದ ಸಲಹೆಗಳು ಮಾರ್ಗದರ್ಶಕವಾಗಿದ್ದವು. ಅವರ ಸಹಕಾರ, ಪ್ರೀತಿಯ ಸೂಚನೆಯ ಮೇರೆಗೇ ನಾವು ತುಮಕೂರು ಜಿಲ್ಲೆಯ ಹತ್ತು ತಾಲ್ಲೂಕುಗಳಲ್ಲಿ ‘ಸಿದ್ಧರಾಮೇಶ್ವರ ಸಂದೇಶ ಯಾತ್ರೆ’ ಕೈಗೊಂಡಿದ್ದೆವು. ಭೋವಿ ಸಮಾಜವನ್ನು ಒಂದೆಡೆ ತಂದು ಸಂಘಟಿಸಿದ್ದು, ಸಿದ್ಧರಾಮೇಶ್ವರ ಜಯಂತ್ಯೋತ್ಸವವನ್ನು ಇತಿಹಾಸದ ಪುಟಗಳಲ್ಲಿ ದಾಖಲಾಗುವಂತೆ ಆಚರಿಸಿದ್ದು ಆ ಪುಣ್ಯಾತ್ಮನ ಬೆಂಬಲದಿಂದಲೇ…” ಎಂದು ಶ್ರೀಗಳು ಗದ್ಗದಿತರಾಗಿದ್ದಾರೆ.

ಅಧಿಕಾರಿಗಳ ಪಾಲಿನ ‘ಆಪತ್ಬಾಂಧವ’
ವೆಂಕಟರಮಣಪ್ಪ ಅವರು ಸಮಾಜದ ಧ್ವನಿಯಿಲ್ಲದವರಿಗೆ ಹೇಗೆ ಆಸರೆಯಾಗಿದ್ದರು ಎಂಬುದನ್ನು ನೆನೆದ ಸ್ವಾಮೀಜಿ, “ಅವರು ಭೋವಿ ಸಮಾಜದ ಅಧಿಕಾರಿಗಳಿಗೆ ಕೇವಲ ನಾಯಕರಾಗಿರಲಿಲ್ಲ, ಒಂದು ಗಟ್ಟಿ ರಕ್ಷಾಕವಚದಂತೆ ಇದ್ದವರು. ಅಧಿಕಾರ ಇರಲಿ, ಬಿಡಲಿ, ತೊಂದರೆಗೆ ಸಿಲುಕಿದ ಸಮಾಜದ ಅಧಿಕಾರಿಗಳು ಕಣ್ಣೀರು ಹಾಕುತ್ತಾ ಬಂದರೆ, ಕಣ್ಣೊರೆಸುವ ಆಪತ್ಬಾಂಧವನಂತೆ ನಿಲ್ಲುತ್ತಿದ್ದರು” ಎಂದು ಕೊಂಡಾಡಿದ್ದಾರೆ.

ರಾಜ್ಯಾದ್ಯಂತ ನಮ್ಮೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಸಭೆ-ಸಮಾರಂಭಗಳಲ್ಲಿ ಭಾಗವಹಿಸುತ್ತಾ, “ಶಿಕ್ಷಣ ಪಡೆಯಿರಿ, ಸಂಘಟಿತರಾಗಿ, ದುಶ್ಚಟ ಮುಕ್ತ ಬದುಕು ಕಟ್ಟಿಕೊಳ್ಳಿ” ಎಂದು ಅವರು ಸಮಾಜಕ್ಕೆ ನೀಡುತ್ತಿದ್ದ ಕರೆ ಇಂದಿಗೂ ಕಿವಿಯಲ್ಲಿ ಮಾರ್ದನಿಸುತ್ತಿದೆ. ಪಾವಗಡ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತು ಸಮಾಜದ ಉದ್ಧಾರಕ್ಕಾಗಿ ತಮ್ಮ ಇಡೀ ಬದುಕನ್ನೇ ಅವರು ಸಮರ್ಪಿಸಿಕೊಂಡಿದ್ದರು.

ತುಂಬಲಾರದ ಶೂನ್ಯ :
“ಅವರ ಈ ಹಠಾತ್ ಅಗಲಿಕೆ ಭೋವಿ ಸಮಾಜಕ್ಕೆ ಹಾಗೂ ಪಾವಗಡ ಕ್ಷೇತ್ರಕ್ಕೆ ಎಂದಿಗೂ ತುಂಬಲಾರದ ದೊಡ್ಡ ನಷ್ಟ ಮತ್ತು ಆಘಾತ. ಆ ಜೀವಕ್ಕೆ ಚಿರಶಾಂತಿ ಸಿಗಲಿ. ತಮ್ಮ ನೆಚ್ಚಿನ ನಾಯಕನನ್ನು ಕಳೆದುಕೊಂಡು ಕಣ್ಣೀರಲ್ಲಿ ಮುಳುಗಿರುವ ಅವರ ಕುಟುಂಬಸ್ಥರಿಗೆ, ಆತ್ಮೀಯ ಮಿತ್ರರಿಗೆ ಹಾಗೂ ಅನಾಥಪ್ರಜ್ಞೆ ಎದುರಿಸುತ್ತಿರುವ ಪಾವಗಡದ ಮತದಾರ ಪ್ರಭುಗಳಿಗೆ ಈ ಅಪಾರ ದುಃಖವನ್ನು ತಡಿಯುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ” ಎಂದು ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ಪ್ರಾರ್ಥಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now