ಬೆಂಗಳೂರು: ಸನದಲ್ಲಿ ಮೇಕೆದಾಟು ವಿಚಾರವಾಗಿ ಸಿದ್ದರಾಮಯ್ಯ ಧ್ವನಿ ಎತ್ತಿದ್ದಾರೆ. ಮೇಕೆದಾಟು ಯೋಜನೆ ಜಾರಿಯಾಗಲೇಬೇಕೆಂದು ಈಗಾಗಲೇ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ಮಾಡಿದ್ದಾರೆ. ರಾಜ್ಯ ಸರ್ಕಾರ ಬಜೆಟ್ ನಲ್ಲಿ 100 ಕೋಟಿ ಅನುದಾನವನ್ನು ನೀಡಿದೆ. ಆದ್ರೆ ಈ ಮಧ್ಯೆ ತಮಿಳುನಾಡು ಕ್ಯಾತೆ ತೆಗೆಯುತ್ತಿದೆ.
ಈ ಸಂಬಂಧ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ತಮಿಳುನಾಡಿನಿಂದ ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕುತ್ತಿದ್ದಾರೆ. ಯೋಜನೆಗೆ ಕಾನೂನು ಬಾಹಿರ ನಿರ್ಣಯ ಮಾಡಿದ್ದಾರೆ. ಕಾನೂನು ಬಾಹಿರ ನಿರ್ಣಯಕ್ಕೆ ಕಾನೂನಾತ್ಮಕ ಹಕ್ಕಿಲ್ಲ. ತಮಿಳುನಾಡು ರಾಜಕೀಯ ಕ್ಯಾತೆ ತೆಗೆಯಲು ನಿರ್ಣಯಿಸಿದೆ.
2018ರಲ್ಲಿ ಸುಪ್ರೀಂ ಕೋರ್ಟ್ ನಿಂದ ಅಂತಿಮ ತೀರ್ಪು ಬಂದಿದೆ. ಆ ತೀರ್ಪನ್ನ ನಾವೂ ಮತ್ತು ಅವರು ಇಬ್ಬರೂ ಒಪ್ಪಿಕೊಂಡಿದ್ದೇವೆ. ಪ್ರತಿ ವರ್ಷ 177.25 ಟಿಎಂಸಿ ನೀರು ಬಿಡಬೇಕು. 7-8 ವರ್ಷಗಳಲ್ಲಿ ಹೆಚ್ಚುವರಿಯಾಗಿ 582 ಟಿಎಂಸಿ ನೀರು ಬಿಡಬೇಕು. ಇಷ್ಟಿದ್ದರೂ ಕಾಲು ಕೆರೆದುಕೊಂಡು ಬಂದರೆ ಕನ್ನಡಿಗರು ಒಪ್ಪುತ್ತಾರಾ..? ಕೇಂದ್ರ ಸರ್ಕಾರದ ಬಳಿ ಸರ್ವಪಕ್ಷ ನಿಯೋಗ ಹೋಗೋಣಾ. ಎರಡು ಸದನಗಳಲ್ಲೂ ನಿರ್ಣಯ ಮಾಡೋಣಾ ಎಂದಿದ್ದಾರೆ.