Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಡಾ.ಎಂ.ಚಂದ್ರಪ್ಪನವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಎಂದಿದ್ದ ಖಾಟ್ರೋತ್‍ಗೆ ಖಡಕ್ ಎಚ್ಚರಿಕೆ ಕೊಟ್ಟ ಸಿದ್ದೇಶ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 06 : ಅಭಿವೃದ್ದಿಯ ಹರಿಕಾರ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪನವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಎಂದು ಹೇಳುವುದಕ್ಕೆ ಜಯಸಿಂಹ ಖಾಟ್ರೋತ್ ಹಾಗೂ ಅವರ ಗುಂಪಿಗೆ ನೈತಿತಕೆಯಿಲ್ಲ. ಗುಂಪುಗಾರಿಕೆ ಬಿಟ್ಟು ತೆಪ್ಪಗಿದ್ದರೆ ಸರಿ. ಕಾರ್ಯಕರ್ತರು ರೊಚ್ಚಿಗೆದ್ದರೆ ಉಳಿಗಾಲವಿಲ್ಲವೆಂದು ಹೊಳಲ್ಕೆರೆ ಬಿಜೆಪಿ.ಮಂಡಲ ಅಧ್ಯಕ್ಷ ಬಿ.ಎಂ.ಸಿದ್ದೇಶ್ ಎಚ್ಚರಿಸಿದರು.

ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕ ಎಂ.ಚಂದ್ರಪ್ಪನವರಿಂದ ಭ್ರಷ್ಠಾಚಾರವಾಗಿದೆ ಎಂದು ಖಾಟ್ರೋತ್ ಅಪ ಪ್ರಚಾರದಲ್ಲಿ ತೊಡಗಿರುವುದರಲ್ಲಿ ಅರ್ಥವಿಲ್ಲ. 2018 ಎಲ್ಲಿ ಎಂ.ಚಂದ್ರಪ್ಪನವರಿಗೆ ಟಿಕೇಟ್ ಕೊಟ್ಟಾಗ ಹನುಮಕ್ಕನನ್ನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿ ಬೀದಿಗೆ ತಂದರು. 2023 ರಲ್ಲಿಯೂ ಎಂ.ಚಂದ್ರಪ್ಪನವರ ವಿರುದ್ದ ಡಾ.ಜಯಸಿಂಹರನ್ನು ಹುಡುಕಿ ವಿಧಾನಸಭೆ ಚುನಾವಣೆಗೆ ನಿಲ್ಲಿಸಿ ಬೀದಿಗೆ ತಂದರು. ಮೂಲ ಬಿಜೆಪಿ.ಎಂದು ಹೇಳಿಕೊಳ್ಳುವ ಯೋಗ್ಯತೆ ಖಾಟ್ರೋತ್‍ಗೆ ಇಲ್ಲ. ನಾಲ್ಕು ವಿಧಾನಸಭೆ ಚುನಾವಣೆಯಲ್ಲಿಯೂ ಎಂ.ಚಂದ್ರಪ್ಪನವರ ವಿರುದ್ದ ಪಿತೂರಿ ನಡೆಸಿದ ಖಾಟ್ರೋತ್ ಯಾವ ಪಕ್ಷದಲ್ಲಿದ್ದಾರೆನ್ನುವುದೇ ಗೊತ್ತಿಲ್ಲ. ಜೈಲಿಗೆ ಹೋಗಿ ಬಂದು ರೌಡಿ ಶೀಟರ್ ಎನಿಸಿಕೊಂಡಿರುವ ಈತನಿಗೆ ನಮ್ಮ ಶಾಸಕರನ್ನು ಅವಹೇಳನವಾಗಿ ಮಾತನಾಡಿದರೆ ನಾವುಗಳು ಸಹಿಸುವುದಿಲ್ಲ. ತಕ್ಕ ಪಾಠ ಕಲಿಸಬೇಕಾಗುತ್ತದೆಂದರು.

ಡಾ.ಎಂ.ಚಂದ್ರಪ್ಪನವರು ಮೊದಲಿನಿಂದಲೂ ಬಿ.ಎಸ್.ಯಡಿಯೂರಪ್ಪನವರ ಪರವಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅವರ ಪುತ್ರ ಎಂ.ಸಿ.ರಘುಚಂದನ್‍ಗೆ ಬಿಜೆಪಿ.ಯಿಂದ ಟಿಕೆಟ್ ಸಿಗಲಿಲ್ಲವೆಂದು ಮುನಿಸಿಕೊಂಡಿದ್ದು, ನಿಜ. ಯಾರಿಗಾದರೂ ಮನಸ್ತಾಪವಿರುತ್ತದೆ. ಈಗ ಎಲ್ಲವೂ ಸರಿ ಹೋಗಿದೆ. ಹೊಳಲ್ಕೆರೆ ಕ್ಷೇತ್ರದಲ್ಲಿ ಕೆರೆ ಕಟ್ಟೆ, ಚೆಕ್‍ಡ್ಯಾಂ, ಶಾಲಾ-ಕಾಲೇಜು, ಉತ್ತಮ ಗುಣಮಟ್ಟದ ರಸ್ತೆ, ಹೈಟೆಕ್ ಆಸ್ಪತ್ರೆಗಳಾಗಿದೆ. ಇಂತಹ ಕೆಲಸ ಆಗಿಲ್ಲವೆಂದು ಯಾರು ಟೀಕಿಸುವಂತಿಲ್ಲ. ಜಯಸಿಂಹ ಖಾಟ್ರೋತ್ ಪಕ್ಷೇತರರಿಂದ ಹಿಡಿದು ಎಲ್ಲಾ ಪಕ್ಷ ಸುತ್ತಾಡಿದ್ದಾರೆಂದು ಬಿ.ಎಂ.ಸಿದ್ದೇಶ್ ಎದುರಾಳಿಗಳ ಟೀಕೆಗೆ ತಿರುಗೇಟು ನೀಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷ ಆರ್.ಅಶೋಕ್, ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಸದಸ್ಯ ಶಿವು, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಅಂಕಳಪ್ಪ, ಪ್ರವೀಣ್, ಶಂಕರ್‍ನಾಯ್ಕ, ರುದ್ರೇಶ್, ಭದ್ರಾನಾಯ್ಕ, ಬಿಜೆಪಿ. ಹಿಂದುಳಿದ ವರ್ಗಗಳ ಅಧ್ಯಕ್ಷ ಗಿರೀಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಯಾನಾಯ್ಕ ಇನ್ನು ಅನೇಕರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment