Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಲಿಂಡರ್ ಬುಕಿಂಗ್​​​ನಲ್ಲಿ ಮಹತ್ವದ ಬದಲಾವಣೆ:ಕೇಂದ್ರದಿಂದ ಹೊಸ ಮಾರ್ಗಸೂಚಿ

---Advertisement---

ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಈಗ ಕಠಿಣ ಕ್ರಮಗಳ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಹಿಂದೆ 55 ದಿನಗಳಿಗೊಮ್ಮೆ ಸಿಲಿಂಡರ್ ಬುಕ್ ಮಾಡುತ್ತಿದ್ದವರು, ಈಗ ಯುದ್ಧದ ಭೀತಿಯಿಂದ ಕೇವಲ 15 ದಿನಗಳಲ್ಲೇ ಬುಕ್ಕಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇದನ್ನು ನಿಯಂತ್ರಿಸಲು ಹೊಸ ನಿಯಮ ಜಾರಿಗೆ ತರಲಾಗಿದೆ.

ವಾಣಿಜ್ಯ ಬಳಕೆಯ (Commercial) ಸಿಲಿಂಡರ್‌ಗಳಿಗಿಂತ ಮನೆ ಬಳಕೆಯ (Domestic) ಗ್ರಾಹಕರಿಗೆ ಮೊದಲ ಆದ್ಯತೆ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. ‘ಮನೆ ಬಳಕೆಯ ಗ್ರಾಹಕರ ಹಿತವೇ ನಮಗೆ ಮುಖ್ಯ’ ಎಂದು ಸರ್ಕಾರ ಸ್ಪಷ್ಟಪಡಿಸಿದೆ.ಎರಡು ಬುಕ್ಕಿಂಗ್‌ಗಳ ನಡುವಿನ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ.

ದೇಶೀಯ ರಿಫೈನರಿಗಳಿಗೆ ಎಲ್‌ಪಿಜಿ ಉತ್ಪಾದನೆಯನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚಿಸುವಂತೆ ಸರ್ಕಾರ ಆದೇಶಿಸಿದೆ. ಗ್ಯಾಸ್ ಪೂರೈಕೆಯಲ್ಲಿ ಸ್ವಾವಲಂಬನೆ ಸಾಧಿಸಲು ಹೊಸ ದೇಶಗಳೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿದೆ. ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ ಮತ್ತು ನಾರ್ವೆ ದೇಶಗಳು ಭಾರತಕ್ಕೆ ಎಲ್‌ಪಿಜಿ ಮಾರಾಟ ಮಾಡಲು ಮುಂದೆ ಬಂದಿವೆ ಎಂದು ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...