Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಥಮ ಪಿಯುಸಿ ಎಕ್ಸಾಂನಲ್ಲಿ ಮಹತ್ವದ ಬದಲಾವಣೆ: 2027ರಿಂದ ರಾಜ್ಯಮಟ್ಟದಲ್ಲಿ ಪರೀಕ್ಷೆ

Significant change to First PUC exams: State-level examinations to be held from 2027
---Advertisement---

ಬೆಂಗಳೂರು: ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ನೀಡುವ ಹಾಗೂ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಹತ್ವದ ತೀರ್ಮಾನ ಕೈಗೊಂಡಿದೆ. 2027ರಲ್ಲಿ ನಡೆಯಲಿರುವ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರಾಜ್ಯಮಟ್ಟದಲ್ಲಿ, ಏಕ ವೇಳಾಪಟ್ಟಿಯಡಿ ನಡೆಸಲು ಇಲಾಖೆ ನಿರ್ಧರಿಸಿದೆ.

ಪರೀಕ್ಷಾ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಇನ್ನು ಮುಂದೆ ಪ್ರಶ್ನೆಪತ್ರಿಕೆಗಳನ್ನು ರಾಜ್ಯಮಟ್ಟದಲ್ಲಿಯೇ ಸಿದ್ಧಪಡಿಸಲಾಗುತ್ತದೆ. ಈ ಜವಾಬ್ದಾರಿಯನ್ನು ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ’ಗೆ ವಹಿಸಲಾಗಿದೆ. ವಿಶೇಷವೆಂದರೆ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಅಕ್ರಮಗಳಿಗೆ ಕಡಿವಾಣ ಹಾಕಲು ಪರೀಕ್ಷೆ ನಡೆಯುವ ದಿನದಂದೇ ರಾಜ್ಯದ ಎಲ್ಲಾ ಕಾಲೇಜುಗಳಿಗೆ ಡಿಜಿಟಲ್ ರೂಪದಲ್ಲಿ ಪ್ರಶ್ನೆಪತ್ರಿಕೆಗಳನ್ನು ರವಾನಿಸಲಾಗುತ್ತದೆ.

ರಾಜ್ಯಾದ್ಯಂತ ಏಕಕಾಲಕ್ಕೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸುವ ಹೊಣೆಯನ್ನು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ನಿರ್ದೇಶಕರು ಹಾಗೂ ಆಯಾ ಜಿಲ್ಲಾ ಉಪ ನಿರ್ದೇಶಕರಿಗೆ ವಹಿಸಲಾಗಿದೆ.

ಮೌಲ್ಯಮಾಪನ ಮತ್ತು ಫಲಿತಾಂಶ ಹೇಗೆ?

ಪರೀಕ್ಷೆಗಳು ಪೂರ್ಣಗೊಂಡ ಬಳಿಕ, ಆಯಾ ಕಾಲೇಜು ಹಂತದಲ್ಲಿ ಪ್ರಾಂಶುಪಾಲರ ಮೇಲ್ವಿಚಾರಣೆಯಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಮೌಲ್ಯಮಾಪನದ ನಂತರ ಸಂಬಂಧಿಸಿದ ಜಿಲ್ಲಾ ಉಪ ನಿರ್ದೇಶಕರು ಫಲಿತಾಂಶವನ್ನು ಪರಿಶೀಲಿಸಿ, ಅಧಿಕೃತ ಅನುಮೋದನೆ ನೀಡಿದ ಬಳಿಕವಷ್ಟೇ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.

Join WhatsApp

Join Now

Join Telegram

Join Now