Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧರ್ಮಸ್ಥಳ ಬುರುಡೆ ಕೇಸಲ್ಲಿ ಮಹತ್ವದ ಬೆಳವಣಿಗೆ..!

---Advertisement---

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರನ್ನು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರು ಭೆರಟಿಯಾಗಿದ್ದಾರೆ. ಇಷ್ಟು ದಿನದಿಂದ ತಲೆ ಬುರುಡೆ ಬಗ್ಗೆ ನಡೆದ ಬೆಳವಣಿಗೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿದ್ದಾರೆ. ಇದುವರೆಗೆ ಏನೆಲ್ಲಾ ಬೆಳವಣಿಗೆ ಆಗಿದೆ ಅಷ್ಟು ಮಾಹಿತಿಯನ್ನು ಗೃಹ ಸಚಿವ ಪರಮೇಶ್ವರ್ ಹಾಗೂ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ.

 

ನಿನ್ನೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆಯಾಗಿತ್ತು. ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಅರ್ಜಿ ಸಲ್ಲಿಕೆಯಾಗಿತ್ತು. ಆದ್ರೆ ಆ ಅರ್ಜಿಯನ್ನ ಮೇ ತಿಂಗಳಿನಲ್ಲಿಯೇ ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಆದರೂ ರಾಜ್ಯ ಸರ್ಕಾರ ಎಸ್ಐಟಿಯನ್ನು ರಚನೆ ಮಾಡಿತ್ತು. ಈ ನಡುವೆ ಸರ್ಕಾರಕ್ಕೆ ಈ ಮಾಹಿತಿ ಇರಲಿಲ್ವಾ ಎಂಬ ಪ್ರಶ್ನೆ ಕಾಡಿತ್ತು.

ಇದರ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರು ವರದಿ ಸಲ್ಲಿಸಿದ್ದಾರೆ. ಇಬ್ಬರ ಜೊತೆಗೆ ಸುಧೀರ್ಘವಾದ ಚರ್ಚೆಯನ್ನು ನಡೆಸಿದ್ದಾರೆ. ಪ್ರಣವ್ ಮೊಹಂತಿ ಅವರು ಎಲ್ಲಾ ಮಾಹಿತಿಯನ್ನು ನೀಡಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಈ ವಿಚಾರದಲ್ಲಿ ಯಾವ ತೀರ್ಮಾನವನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಸುಪ್ರೀಂ ಕೋರ್ಟ್ ಅರ್ಜಿಗೆ ತಡೆ ನೀಡಿದ್ದರು ಸಹ ನಂತರದ ಬೆಳವಣಿಗೆಯ ಆಧಾರದ ಮೇಲೆ ಎಸ್ಐಟಿ ರಚನೆ ಮಾಡಿತ್ತು. ನಂತರದ ದಿನಗಳಲ್ಲಿ ಒಂದಷ್ಟು ಅಸ್ಥಿ‌ಪಂಜರಗಳು, ತಲೆ ಬುರುಡೆಗಳು ಸಹ ಸಿಕ್ಕಿವೆ. ಅದರ ಮಾಹಿತಿಗಾಗಿ ಎಫ್ಎಸ್ಎಲ್ ಗೂ ಕಳುಹಿಸಿದ್ದಾರೆ. ವರ್ಇ ಬಂದ ನಂತರ ಆ ಸಾವುಗಳು ಸಹಜ ಸಾವಾಗಿತ್ತಾ..? ಬೇರೆ ಏನಾದ್ರೂ ಆಗಿದೆಯಾ ಎಂಬ ಸತ್ಯ ತಿಳಿಯಲಿದೆ. ಈಗ ಸರ್ಕಾರದ ಮುಂದಿನ ನಡೆ ಬಗ್ಗೆ ಎಲ್ಲರ ಚುತ್ತ ನೆಟ್ಟಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now