ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಜುಲೈ17: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವತಿಯಿಂದ ಪ್ರತಿ ವರ್ಷದ ಡಿಸೆಂಬರ್ 03ರಂದು ಆಚರಿಸಲಾಗುವ ರಾಷ್ಟ್ರ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಸಮಾರಂಭದಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ “ರಾಷ್ಟ್ರ ಪ್ರಶಸ್ತಿ-2025” ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ಜಾಲತಾಣ www.depwd.gov.in ಮತ್ತು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ www.awards.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ವಿಕಲಚೇತನರ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗಳು “ರಾಷ್ಟ್ರ ಪ್ರಶಸ್ತಿ-2025”ಕ್ಕೆ ಅರ್ಜಿಯನ್ನು ಆನ್‍ಲೈನ್ ಮೂಲಕ ಎಲ್ಲಾ ಪೂರಕ ದಾಖಲಾತಿಗಳೊಂದಿಗೆ ಸಲ್ಲಿಸಿ, ಅರ್ಜಿ ಸಲ್ಲಿಸಿದ ದಾಖಲಾತಿಗಳ 02 ಪ್ರತಿಗಳನ್ನು ಚಿತ್ರದುರ್ಗ ನಗರದ ಒನಕೆ ಓಬವ್ವ ಸ್ಟೇಡಿಯಂ ರಸ್ತೆ, ಜಿಲ್ಲಾ ಬಾಲಭವನ ಆವರಣ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್