Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಂಬರ್ ಬೇರೆ ಬೇರೆ ಕೊಡುತ್ತಿರುವ ಕಾರಣ ಅದರ ಲೆಕ್ಕ ಸಿಕ್ತಾ ಇಲ್ಲ : ಸಚಿವ ಸುಧಾಕರ್

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಶಾಲಾ, ಕಾಲೇಜುಗಳನ್ನು ಆರಂಭಿಸಲಾಗಿದೆ. ಪ್ರಾಥಮಿಕ ಶಾಲೆ ಆರಂಭಿಸಲು ಚರ್ಚೆಯಾಗಿದೆ. ಈ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯ ರೂಪಿಸುವುದು ಸರ್ಕಾರ ಕರ್ತವ್ಯ. ಪೋಷಕರ ಕಡೆಯಿಂದಲೂ ಒತ್ತಡ ಬರುತ್ತಿದೆ. ಶಿಕ್ಷಣ ಸಂಸ್ಥೆಗಳು ಆರಂಭವಾದ ಬಳಿಕ ದುಷ್ಪರಿಣಾಮ ಉಂಟಾಗಿಲ್ಲ. ಆದ್ದರಿಂದ ವಿಶ್ವಾಸ ಬಂದಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಎಲ್ಲ ಹಬ್ಬಗಳ ಆಚರಣೆಗೆ ಒಂದೇ ಕೋವಿಡ್ ಮಾರ್ಗಸೂಚಿ ನೀಡಲಾಗಿದೆ. ಸರ್ಕಾರಕ್ಕೆ ಯಾವುದೇ ಚಟುವಟಿಕೆ ನಿರ್ಬಂಧಿಸುವುದರಲ್ಲಿ ಸಂತೋಷವಿಲ್ಲ. ಆದರೆ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಎಲ್ಲ ಹಿತ ಕಾಯುವುದು ಸರ್ಕಾರ ಕೆಲಸ. ಕೋವಿಡ್ ಮಾರ್ಗಸೂಚಿಗೆ ನಮ್ಮನ್ನೂ ಒಳಗೊಂಡಂತೆ ಎಲ್ಲರೂ ಬೆಲೆ ಕೊಡಬೇಕು. ಚುನಾವಣಾ ಆಯೋಗಕ್ಕೆ ಪತ್ರ ಬರೆದು, ಚುನಾವಣೆ ಮುಂದೂಡಬೇಕು ಎಂದು ಕೋರಲಾಗಿತ್ತು. ಈ ಎಲ್ಲ ಸಂದಿಗ್ಧ ಪರಿಸ್ಥಿತಿ ಹೊರತಾಗಿಯೂ ಕೋವಿಡ್ ನಿಯಂತ್ರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮೊದಲ ಡೋಸ್ ಪಡೆದಾಗ ನೀಡಿದ ಫೋನ್ ಸಂಖ್ಯೆಯನ್ನೇ ಎರಡನೇ ಡೋಸ್ ಪಡೆದಾಗಲೂ ನೀಡಬೇಕು. ಇಲ್ಲದಿದ್ದರೆ ಲಸಿಕೆ ಪಡೆದವರ ಪ್ರಮಾಣದ ಬಗ್ಗೆ ಸರಿಯಾದ ಮಾಹಿತಿ ಲಭ್ಯವಾಗುವುದಿಲ್ಲ. ಕೋವಿಡ್ ಮೂರನೇ ಅಲೆ ತಡೆಯಲು ಸುರಕ್ಷತಾ ಕ್ರಮ ಪಾಲಿಸಬೇಕು ಎಂದು ಕೋರಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Apple – Diabetes: ಮಧುಮೇಹ ರೋಗಿಗಳು ಸೇಬು ತಿಂದರೆ ಏನಾಗುತ್ತೆ ಗೊತ್ತಾ..?

ಸುದ್ದಿಒನ್ : ದಿನವೂ ಸೇಬು ತಿಂದರೆ ವೈದ್ಯರ ಬಳಿ ಹೋಗುವ ಅಗತ್ಯ ಬರುವುದಿಲ್ಲ ಎನ್ನುತ್ತಾರೆ. ಆದಾಗ್ಯೂ, ಸೇಬು ತಿನ್ನುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ವೈದ್ಯರ ಸಲಹೆಯಂತೆ ಮಧುಮೇಹ ಇರುವವರಿಗೂ ಸೇಬು ತುಂಬಾ ಒಳ್ಳೆಯದು. ಏಕೆಂದರೆ

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ,

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ, ಗುರುವಾರ ರಾಶಿ ಭವಿಷ್ಯ -ಏಪ್ರಿಲ್-18,2024 ಸೂರ್ಯೋದಯ: 06:01, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ, ಉತ್ತರಾಯಣಂ,ತಿಥಿ: ದಸಮಿ, ನಕ್ಷತ್ರ:

ಹಿರಿಯೂರು ಬಳಿ ರಸ್ತೆ ಅಪಘಾತ | 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ

error: Content is protected !!